ಮಂಡ್ಯ: ಜಿಲ್ಲೆಯಲ್ಲಿ ಕಾವೇರಿ ಹೋರಾಟ ಮುಂದುವರೆದಿದ್ದು, ಮಂಡ್ಯದಲ್ಲಿ ಮೈ-ಬೆಂ ಹೆದ್ದಾರಿ ತಡೆದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ನಡೆಯುತ್ತಿರುವ ರೈತ ಹಿತರಕ್ಷಣಾ ಸಮಿತಿ ಹೋರಾಟಕ್ಕೆ ಕೆ.ಆರ್.ಪೇಟೆ ಮಹಿಳೆಯರು ಬೆಂಬಲ ಸೂಚಿಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಟ್ಟ ಪ್ರಾಧಿಕಾರ, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಸ್ತೆ ತಡೆಯಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.