Tuesday, April 21, 2026
Google search engine

Homeಸ್ಥಳೀಯಮೈಸೂರು ಡಿಸಿ ಕಚೇರಿಗೆ ರೈತರ ಮುತ್ತಿಗೆ : ಕಬ್ಬಿನ ಬಾಕಿ ಹಣಕ್ಕಾಗಿ ನೂರಾರು ರೈತರಿಂದ ಪ್ರತಿಭಟನೆ

ಮೈಸೂರು ಡಿಸಿ ಕಚೇರಿಗೆ ರೈತರ ಮುತ್ತಿಗೆ : ಕಬ್ಬಿನ ಬಾಕಿ ಹಣಕ್ಕಾಗಿ ನೂರಾರು ರೈತರಿಂದ ಪ್ರತಿಭಟನೆ

ಮೈಸೂರು : ರಾಜ್ಯ ಸರ್ಕಾರ ನಿಗದಿ ಮಾಡಿರುವ ಹೆಚ್ಚುವರಿ ಹಣ ನಿಗದಿ ಮಾಡಿಲ್ಲ ಎಂದು ಆರೋಪಿಸಿ ಇಂದು ರೈತಮುಖಂಡರು  ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆಗೆ ಯತ್ನಿಸಿದ್ದು ಪೊಲೀಸರು ತಡೆಯೊಡ್ಡಿದರು.

ರಾಜ್ಯ ಸರ್ಕಾರ ನಿಗದಿ ಮಾಡಿರುವ ಹೆಚ್ಚುವರಿ ಹಣ ನೂರು ರೂಪಾಯಿ ಕಬ್ಬು ಬೆಳೆಗಾರರಿಗೆ ಪಾವತಿ ಮಾಡಿಲ್ಲ ಎಂದು ಆರೋಪಿಸಿ ನೂರಾರು ರೈತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದು ಈ ವೇಳೆ ಕಚೇರಿಯ ಒಳಗೆ ನುಗ್ಗಲು ಯತ್ನಿಸಿದರು.  ತಕ್ಷಣ ಪೊಲೀಸರು  ರೈತರನ್ನ ತಡೆದಿದ್ದು,   ರೈತರು ಪೊಲೀಸರ ನಡುವೆ ತಳ್ಳಾಟ ನೂಕಾಟ  ನಡೆಯಿತು. ನಂತರ ಪ್ರತಿಭಟನಾನಿರತ ರೈತರು ಕಚೇರಿಯ ಪೂರ್ಟಿಕೂದಲ್ಲಿ ಕುಳಿತು ಧರಣಿ ಮುಂದುವರೆಸಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್,  ರೈತರ ಸಂಕಷ್ಟ ಅರಿಯದ ಬಣ್ಣಾರಿ ಸಕ್ಕರೆ ಕಾರ್ಖಾನೆ ರೈತರನ್ನ ನಿರಂತರ ಶೋಷಣೆ ಮಾಡುತ್ತಿದೆ. ಪ್ರತಿ ವರ್ಷವು ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡುತ್ತಲೇ ರೈತರನ್ನು ವಂಚಿಸುತ್ತಿದೆ. ಸಕ್ಕರೆ ಕಾರ್ಖಾನೆ ನಡೆಸುತ್ತಿರುವ ಬಣ್ಣಾರಿ ಕಾರ್ಖಾನೆ ಮಾಲೀಕರನ್ನು ಜೈಲಿಗೆ ಕಳಿಸಬೇಕು. ಇಂತಹ ಉಪಟಳದಿಂದಲೇ ರೈತರು ಕಬ್ಬು ಬೆಳೆಯನ್ನ ಕಡಿಮೆ ಮಾಡಿದ್ದಾರೆ. 15 ಲಕ್ಷ ಟನ್ ಕಬ್ಬು ಅರೆಯುವ ಸಾಮರ್ಥ್ಯ ಇರುವ ಬಣ್ಣಾರಿ ಕಾರ್ಖಾನೆಗೆ ಕೇವಲ ಏಳುವರೆ ಲಕ್ಷ ಟನ್ ಮಾತ್ರ ಸರಬರಾಜು ಮಾಡಿದ್ದಾರೆ. ಈ ಕಬ್ಬಿನ ಹೆಚ್ಚುವರಿ ಹಣ ಏಳುವರೆ ಕೋಟಿ ರೈತರಿಗೆ ಪಾವತಿಸದೆ ನಾಟಕವಾಡುತ್ತಿದ್ದಾರೆ. ಕೂಡಲೇ ಜಿಲ್ಲಾಧಿಕಾರಿಗಳು ಸಕ್ಕರೆ ಗೋದಾಮು ವಶಕೆ ಪಡೆದು ಸಕ್ಕರೆ ಮಾರಾಟ ಮಾಡಿ ರೈತರ ಹಣ ಕೂಡಿಸಬೇಕು. ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರ ಎಥನಾಲ್ ಅನ್ನು ಪೆಟ್ರೋಲ್ ಜೊತೆ ಶೇಕಡಾ ಇಪ್ಪತ್ತರಷ್ಟು ಮಿಶ್ರಣ ಮಾಡಲು ಸೂಚನೆ ನೀಡಿರುವುದು ಸ್ವಾಗತಾರ್ಹ ಕ್ರಮ.  ಚಳುವಳಿ ನಿರತ ರೈತರು ಕಬ್ಬಿನ ಹಣ ಕೊಡಿಸುವ ತನಕ ನಿರಂತರ ಪ್ರತಿಭಟನಾ ಧರಣಿ  ನಡೆಸುತ್ತಿದ್ದಾರೆ ಎಂದರು.

ಚಳುವಳಿಯಲ್ಲಿ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರು ಶಂಕರ್,  ಮೂಕಳ್ಳಿ ಮಹದೇವಸ್ವಾಮಿ, ಪಟೇಲ್ ಶಿವಮೂರ್ತಿ, ಉಡಿಗಾಲ ರೇವಣ್ಣ, ಸೋಮಶೇಖರ್,  ಮಾರ್ಬಳ್ಳಿ ನೀಲಕಂಠಪ್ಪ, ವರಕೋಡು ನಾಗೇಶ್, ಲಕ್ಷ್ಮೀಪುರ ವೆಂಕಟೇಶ್,, ಕುರುಬೂರು ಸಿದ್ದೇಶ್, ದೇವನೂರು ವಿಜಯೇಂದ್ರ,  ಮಹದೇವಸ್ವಾಮಿ, ಕೆಂಡಗಣ್ಣಪ್ಪ, ನಾಗೇಶ್, ಕುರುಬೂರು ಪ್ರದೀಪ್, ಪ್ರಸಾದ್ ನಾಯಕ, ಗೌರಿಶಂಕರ್, ಗುರುಸ್ವಾಮಿ, ಅಂಬಳೆ ಮಂಜುನಾಥ್, ಪರಶಿವಮೂರ್ತಿ, ಸಾತಗಳ್ಳಿ ಬಸವರಾಜ, ಸುಂದರಪ್ಪ, ಸತೀಶ್, ದೇವನೂರು ಮಹಾದೇವಪ್ಪ, ರಂಗರಾಜು, ಕೆಂಡಗಣಸ್ವಾಮಿ, ಶಿವಸ್ವಾಮಿ, ರವಿಕುಮಾರ್, ನಂಜುಂಡಸ್ವಾಮಿ, ನಾಗೇಂದ್ರ, ಕಮಲಮ್ಮ ಸೇರಿದಂತೆ 250ಕ್ಕೂ ಹೆಚ್ಚು ರೈತರು ಇದ್ದರು.

RELATED ARTICLES
- Advertisment -
Google search engine

Most Popular