ವರದಿ: ಎಡತೊರೆ ಮಹೇಶ್
ಎಚ್.ಡಿ.ಕೋಟೆ: ರಾಷ್ಟ್ರೀಯ ರೈತ ದಿನಾಚರಣೆಯನ್ನು ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ವತಿಯಿಂದ ನಾಳೆ ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ.
ಬೆ.10 ಗಂಟೆಗೆ ಪಟ್ಟಣದ ಆದಿಚುಂಚನಗಿರಿ ಸಮುದಾಯ ಭವನದಿಂದ ಹಲವು ಕಲಾತಂಡಗಳೊಂದಿಗೆ ರೈತರು ಸಾಗಿ ಬೆ.11 ಗಂಟೆಗೆ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಕಾರ್ಯಕ್ರಮ ನಡೆಸಲಾಗುವುದು. ಶಾಸಕ ಅನಿಲ್ ಚಿಕ್ಕಮಾದು ಕಾರ್ಯಕ್ರಮ ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಮೈಸೂರು ಜಿಲ್ಲಾಧಿಕಾರಿಗಳು ಜಿ. ಲಕ್ಷ್ಮೀಕಾಂತ್ ರೆಡ್ಡಿ, ಸಂಸದ ಸುನೀಲ್ ಬೋಸ್ ಮತ್ತು ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಹಾಗೂ ಬಿಜೆಪಿ ಮುಖಂಡ ಕೆ.ಎಂ ಕೃಷ್ಣ ನಾಯಕ್ ಭಾಗವಹಿಸುವರು. ಕರ್ನಾಟಕ ರಾಜ್ಯ ರೈತ ಕಲ್ಯಾಣ ಸಂಘದ ಸಂಸ್ಥಾಪಕ ಹಾಗೂ ಅಧ್ಯಕ್ಷ ಭೂಮಿಪುತ್ರ ಸಿ.ಚಂದನ್ ಗೌಡ ಅಧ್ಯಕ್ಷತೆ ವಹಿಸುವರು.
ಸಂಘದ ಎಚ್.ಡಿ.ಕೋಟೆ ತಾಲೂಕು ಅಧ್ಯಕ್ಷ ಉಮೇಶ್, ಸರಗೂರು ತಾಲೂಕು ಅಧ್ಯಕ್ಷ ಲೋಕೇಶ್ ಸೇರಿದಂತೆ ಮುಖ್ಯ ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ತಹಸೀಲ್ದಾರ್ ಸೇರಿದಂತೆ ಜಿಲ್ಲೆ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.