ಮಂಡ್ಯ: ಹೊಸ ವರ್ಷದ ದಿನವೂ ಕಾವೇರಿಗಾಗಿ ರೈತರ ಹೋರಾಟ ಮುಂದುವರೆದಿದ್ದು, 37ನೇ ದಿನಕ್ಕೆ ರೈತರ ಉಪವಾಸ ಸತ್ಯಾಗ್ರಹ ಅಂತ್ಯವಾಗಿದೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಳೆದ 119ದಿನದಿಂದ ನಿರಂತರವಾಗಿ ಧರಣಿ ನಡೆಯುತ್ತಿದೆ. ಈ ವೇಳೆ ರಾಜ್ಯ ಸರ್ಕಾರ ಹಿನ್ನಲೆ ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಸುತ್ತಿನ ಹೋರಾಟ ಕೈಗೆತ್ತಿಕೊಳ್ಳಲಾಗಿದೆ.
ಇಂದಿನಿಂದ ಕಾವೇರಿ ನದಿ ನೀರು ರಕ್ಷಣೆಗಾಗಿ ಕರಪತ್ರ ಚಳವಳಿ ಹಮ್ಮಿಕೊಂಡಿದ್ದು, ಮಾಜಿ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಚಳವಳಿಗೆ ಚಾಲನೆ ನೀಡಿದ್ದಾರೆ.
ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.
ಈ ವೇಳೆ ಮಾತನಾಡಿದ ಮಾಜಿ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ,ರಾಜ್ಯದ ರೈತರಿಗೆ ಸರ್ಕಾರ ಅನ್ಯಾಯ ಮಾಡಿದೆ. ತಮಿಳುನಾಡಿಗೆ ನೀರಿನ ಅವಶ್ಯಕತೆ ಇಲ್ಲದಿದ್ದರೂ ತಮಿಳುನಾಡಿಗೆ ನೀರು ಬಿಡುವುದು ಅವಶ್ಯಕತೆ ಇಲ್ಲ. ರಾಜ್ಯ ಸರ್ಕಾರ ಸಮರ್ಪಕವಾದ ವಾದ ಮಾಡುವಲ್ಲಿ ವಿಫಲವಾಗಿದೆ. ರಾಜ್ಯ ಸರ್ಕಾರ ರಾಜಕಾರಣ ಮಾಡುವ ಮೂಲಕ ಅನ್ಯಾಯ ಮಾಡಿದೆ. ತಕ್ಷಣವೇ ಇನ್ನಾದರು ಕಾವೇರಿ ಉಳಿಸುವ ಕೆಲಸ ಮಾಡಲಿ. ಸಂಕಷ್ಟದ ಸೂತ್ರ ಅನುಸರಿಸಿಲ್ಲ. ಇಲ್ಲ ಇನ್ನೂ ದೊಡ್ಡ ಮಟ್ಟದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.