ವರದಿ, ಎಡತೊರೆ ಮಹೇಶ್
ಎಚ್ ಡಿ ಕೋಟೆ: ದಿನಾಂಕ 22,07, 2025 ಮಂಗಳವಾರ ಡಾಕ್ಟರ್ ಬಿಆರ್ ಅಂಬೇಡ್ಕರ್ ಭವನದಲ್ಲಿ ರೈತ ಹುತಾತ್ಮ ದಿನಾಚರಣೆಯನ್ನು ಭಾರತೀಯ ಕ್ರಾಂತಿಕಾರಿ ಕಿಶನ್ ಸೇನಾ ರೈತ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದೆ .
ಎಚ್ ಡಿ ಕೋಟೆ , 45ನೇ ರೈತ ಹುತಾತ್ಮ ದಿನಾಚರಣೆಯ ಅಂಗವಾಗಿ ಎತ್ತಿನ ಗಾಡಿ ,ಬೈಕ್ ಮುಖಾಂತರ ಎಚ್ ಡಿ ಕೋಟೆ ಗದ್ದಿಗೆ ಸರ್ಕಲ್ ಇಂದ ಹ್ಯಾಂಡ್ ಪೋಸ್ಟ್ ಸರ್ಕಲ್ ವರಿಗೆ ಜಾತ ನಡೆಸಿ ನಂತರ ಅಂಬೇಡ್ಕರ್ ಭವನದಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ ಅಂದೆ ತಾಲೂಕು ಕಚೇರಿ ಉದ್ಘಾಟನೆ, ರೈತರಿಗೆ ಸನ್ಮಾನ, ರೈತರ ಹೆಣ್ಣು ಮಕ್ಕಳಿಗೆ ಟೈಲರಿಂಗ್ ತರಬೇತಿ ಹಾಗೂ ರೈತರ ಮಕ್ಕಳಿಗೆ ಉಚಿತವಾಗಿ ಕಂಪ್ಯೂಟರ್ ತರಬೇತಿಗೆ ಚಾಲನೆ ನೀಡಲಾಗುವುದು, ಈ ಕಾರ್ಯಕ್ರಮವನ್ನು ಶಾಸಕ ಅನಿಲ್ ಚಿಕ್ಕಮಾದು ರವರು ಉದ್ಘಾಟಿಸಲಿದ್ದು ಹುಣಸೂರು ಉಪ ವಿಭಾಗ ಅಧಿಕಾರಿಗಳು ತಾಲೂಕು ದಂಡಾಧಿಕಾರಿಗಳು ಹಾಗೂ ಎಲ್ಲ ಇಲಾಖೆ ಅಧಿಕಾರಿಗಳು ಭಾಗವಹಿಸಲಿದ್ದು ಈ ಒಂದು ಕಾರ್ಯಕ್ರಮಕ್ಕೆ ರಾಜ್ಯ, ಜಿಲ್ಲಾ, ಮತ್ತು ತಾಲೂಕು ಮಟ್ಟದಲ್ಲಿ ಪದಾಧಿಕಾರಿಗಳು ಹಾಗೂ ತಾಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಈ ಕಾರ್ಯಕ್ರಮವನ್ನು ಯಶಸ್ಸಿಗೊಳಿಸಬೇಕೆಂದು ರಾಜ್ಯ ಯುವ ಘಟಕದ ಅಧ್ಯಕ್ಷರಾದ ರಫಿ ಉಲ್ಲಾ ತಿಳಿಸಿದ್ದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಎಂ ಎನ್ ಕುಕನೂರು, ರಾಜ್ಯ ಯುವ ಘಟಕ ಅಧ್ಯಕ್ಷರಾದ ರಫಿ ಉಲ್ಲಾ, ಜಿಲ್ಲಾಧ್ಯಕ್ಷ ಗಂಗಾಧರ್, ತಾಲೂಕು ಅಧ್ಯಕ್ಷ ಬೂದನೂರು ಮಾದೇವು, ತಂಜಿಂ, ಶಶಿಕುಮಾರ್, ಗೋವಿಂದ್ ರಾಜ್, ಯಶೋಧ, ಈವನ್ ರಾಜ್, ತಸ್ಲೀಮ್, ವೆಂಕಟಯ್ಯ, ಸೇರಿದಂತೆ ರೈತ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು