ಧಾರವಾಡ : ಜಿಲ್ಲೆಯ ೦೮ ತಾಲ್ಲೂಕುಗಳನ್ನು ರಾಜ್ಯಸರ್ಕಾರ ಬರ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದು, ಬರ ಘೋಷಿತ ತಾಲ್ಲೂಕುಗಳಲ್ಲಿ ಬೆಳೆನಷ್ಟವಾಗಿರುವ ರೈತರು ಪರಿಹಾರಧನ ಪಡೆಯಲು ಕಡ್ಡಾಯವಾಗಿ ಎಫ್‌ಐಡಿ ಹೊಂದಿರಬೇಕು ಹಾಗೂ ಎಫ್‌ಐಡಿಯಲ್ಲಿ ರೈತರು ತಮ್ಮ ಹಕ್ಕಿನಲ್ಲಿರುವ ಎಲ್ಲಾ ಸಾಗುವಳಿ ಭೂಮಿಗಳ ವಿವರಗಳನ್ನು ಸೇರಿಸಿರಬೇಕು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಡಾ.ಕಿರಣಕುಮಾರ ಅವರು ತಿಳಿಸಿದ್ದಾರೆ.