ಮಂಡ್ಯ: ಕಾವೇರಿ ವಿಚಾರದಲ್ಲಿ ಕಾನೂನು ಹೋರಾಟಕ್ಕೆ ಮಂಡ್ಯದ ಜಿಲ್ಲಾ ರೈತ ಸಂಘದ ಕಾರ್ಯಕರ್ತರು ಮುಂದಾಗಿದ್ದು, ಸುಪ್ರೀಂಕೋರ್ಟ್ ಹಿರಿಯ ವಕೀಲ ರವಿವರ್ಮ ಮೂಲಕ ಅರ್ಜಿ ಸಲ್ಲಿಸಲಾಗಿದೆ.
ಸಲ್ಲಿಸಿರುವ ಅರ್ಜಿಯಲ್ಲಿ ಕಾವೇರಿ ಕೊಳ್ಳದ ವಸ್ತು ಸ್ಥಿತಿ, ಪ್ರಸ್ತುತ ಡ್ಯಾಂ ನಲ್ಲಿರುವ ನೀರಿನ ಅಂಕಿ ಅಂಶದ ಸಮೇತ ಮಾಹಿತಿ ನೀಡಲಾಗಿದೆ. ಇಂದು ಸುಪ್ರೀಂಕೋರ್ಟ್ ನಲ್ಲಿ ರೈತರ ಅರ್ಜಿ ವಿಚಾರಣೆಗೆ ಬರಲಿದೆ.
ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುವ ಬಗ್ಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾಹಿತಿ ನೀಡಿದ್ದಾರೆ.