Tuesday, April 22, 2025
Google search engine

Homeಸ್ಥಳೀಯನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಪ್ರತಿಭಟನೆ

ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿ ನೀರಾವರಿ ಇಲಾಖೆ ಮುಖ್ಯ ಇಂಜಿನಿಯರ್ ಕಚೇರಿ ಮುಂದೆ ರೈತರ ಪ್ರತಿಭಟನೆ

ಮೈಸೂರು:  ಕಾವೇರಿ ಕಬಿನಿ ಅಚ್ಚುಕಟ್ಟು ಭಾಗದ ಕೆರೆಗಳು ಒಣಗಿದ್ದು ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲ. ಬೆಳೆಗಳು ಒಣಗಿ ಹಾಳಾಗುತ್ತಿವೆ. ತಕ್ಷಣವೇ ಕಾಲುವೆಗಳ ಮೂಲಕ ನೀರು ಹರಿಸಿ ಕೆರೆ ಕಟ್ಟೆಗಳನ್ನು ತುಂಬಿಸಿ ಎಂದು ಒತ್ತಾಯಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರ ಸಂಘದ ನೂರಾರು ರೈತರು ಪ್ರತಿಭಟನೆ ನಡೆಸಿ ದಕ್ಷಿಣ ವಲಯ ನೀರಾವರಿ ಇಲಾಖೆಯ ಉಪ ಮುಖ್ಯ ಅಭಿಯಂತರಿಗ ಗೌತಮ್ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಮೂರು ದಿನದ ಒಳಗೆ ನೀರು ಹರಿಸುವ ನಿರ್ಧಾರ ಪ್ರಕಟಿಸಬೇಕು ಎಂದು ಇದೇ ಸಂರ್ಭದಲ್ಲಿ  ಒತ್ತಾಯಿಸಲಾಯಿತು.

ರೈತರು ಮಾಡಿದ ಸಾಲ ತೀರಿಸಲಾಗದೇ ಜೀವನ ನಡೆಸಲು ಕಷ್ಟಕರ ವಾಗಿದ್ದು, ಸರ್ಕಾರವೇ ಬರಗಾಲ ಘೋಷಣೆ  ಮಾಡಿದದೆ. ಬರ ಪರಿಹಾರ ಎಕರೆಗೆ ಕನಿಷ್ಟ 25,000/- ಹಾಗೂ ಜೀವನ ನಿರ್ವಹಣೆಗೆ ಪ್ರತಿ ತಿಂಗಳು ಪ್ರತಿ ಕುಟುಂಬಕ್ಕೆ ರೂ -10,000/- ಕೊಡಬೇಕು ಎಂದು ಸರ್ಕಾರಕ್ಕೆ ಒತ್ತಯಿಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿದ ರಾಜ್ಯಾಧ್ಯಕ್ಷರಾಧ ಕುರುಬುರ್ ಶಾಂತಕುಮಾರ್ ಮಾತನಾಡಿ, ತಮಿಳುನಾಡಿನ ಮುಖ್ಯಮಂತ್ರಿಗಳ ಬಾಂಧವ್ಯಕ್ಕೆ ತಲೆಬಾಗಿ ನೀರಾವರಿ ಸಚಿವ ಡಿ ಕೆ ಶಿವಕುಮಾರ್ ಅವರು ಕಾವೇರಿ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಿ ಖಾಲಿ ಮಾಡಿದ ಕಾರಣ ಬೆಂಗಳೂರು ನಗರದ ನಿವಾಸಿಗಳು ಕಾವೇರಿ ಅಚ್ಚುಕಟ್ಟು ಭಾಗದ ರೈತರು ನೀರಿನ ಸಮಸ್ಯೆಗೆ ಬಲಿಯಾಗಿದ್ದಾರೆ. ಅಚ್ಚುಕಟ್ಟು ಭಾಗದ ಕೆರೆಕಟ್ಟೆಗಳು ಒಣಗಿ ಹೋಗಿವೆ. ಜನ ಜಾನುವಾರುಗಳು ಕುಡಿಯುವ ನೀರಿಗೆ ಕಾದಾಡುತ್ತಿದ್ದಾರೆ. ಕೂಡಲೇ ನಾಲೆಗಳಲ್ಲಿ ನೀರು ಹರಿಸಿ ರೈತರ ರಕ್ಷಿಸಬೇಕು, ಕಾವೇರಿ ಅಚ್ಚು ಕಟ್ಟು ಭಾಗದ ರೈತರು ನರಕಯಾತನೆ ಅನುಭವಿಸುತ್ತಿದ್ದಾರೆ  ಕೇಂದ್ರ ರಾಜ್ಯ ಸರ್ಕಾರಗಳು ರೈತರನ್ನ ಹಗುರವಾಗಿ ಕಾಣುತ್ತಿವೆ ದೆಹಲಿಯಲ್ಲಿ ಚಳುವಳಿ ಮಾಡುವ ರೈತರ ಶಕ್ತಿ ಹೆಚ್ಚಿಸಲು ನಾವೆಲ್ಲ ನಿರಂತರ ಹೋರಾಟ ಮಾಡಬೇಕಾಗಿದೆ, ಎಂದು ರೈತರಿಗೆ ಕರೆ ನೀಡಿದರು.

ಇಂದಿನ ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಪಿ ಸೋಮಶೇಖರ್ಇಂದಿನ ಚಳುವಳಿಯಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಪಿ ಸೋಮಶೇಖರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್,  ಜಿಲ್ಲಾ ಪ್ರಧಾನಕಾರ್ಯದರ್ಶಿ ಕಿರಗಸೂರು ಶಂಕರ್, ಜಿಲ್ಲಾ ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ, ಮುಖಂಡರಾದ  ಸಿದ್ದೇಶ್, ವೆಂಕಟೇಶ್ , ರಾಜೇಶ್, ದೇವನೂರು ವಿಜಯೇಂದ್ರ, ಪ್ರದೀಪ್, ಸೂರಿ, ಉಮೇಶ್, ಕಾಟೂರು ನಾಗೇಶ್, ಅಂಬಳೆ ಮಂಜುನಾಥ್, ಸುನಿಲ್,  ಶಿವಸ್ವಾಮಿ ಚೇತನ್, ಶಂಭು, ಶಾಂತರಾಜ್, ಶಿವಮೂರ್ತಿ, ಮಂಜುನಾಥ್, ಶಿವಕುಮಾರ್, ನೂರಕ್ಕೂ ಹೆಚ್ಚು ರೈತರು ಭಾಗವಹಿಸಿದ್ದರು.

RELATED ARTICLES
- Advertisment -
Google search engine

Most Popular