ಗದಗ: ಸಾರಿಗೆ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸಾವಿಗೀಡಾದ ಘಟನೆ ನರಗುಂದದ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ರಾಜೇಶ್ವರಿ (45), ಐಶ್ವರ್ಯ (16) ಹಾಗೂ ವಿಜಯ (12) ಎಂದು ಗುರುತಿಸಲಾಗಿದೆ. ರುದ್ರಪ್ಪ ಕುಟುಂಬ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿದ್ದರು ಎಂದು ತಿಳಿದು ಬಂದಿದೆ.
ನರಗುಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.



