Friday, April 18, 2025
Google search engine

Homeಸಿನಿಮಾಚಲನಚಿತ್ರ ನಟಿ ಅನುಗೌಡ ಮೇಲೆ ಮಾರಣಾಂತಿಕ ಹಲ್ಲೆ: ದೂರು ದಾಖಲು

ಚಲನಚಿತ್ರ ನಟಿ ಅನುಗೌಡ ಮೇಲೆ ಮಾರಣಾಂತಿಕ ಹಲ್ಲೆ: ದೂರು ದಾಖಲು

ಶಿವಮೊಗ್ಗ: ಕಿರುತೆರೆ ಮತ್ತು ಚಲನಚಿತ್ರ ನಟಿ ಅನುಗೌಡ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದಲ್ಲಿ ನಡೆದಿದೆ.

ಸದ್ಯ ನಟಿ ಅನುಗೌಡ ಸಾಗರದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಮೀನಿನ ವಿಚಾರದಲ್ಲಿ ಸ್ಥಳೀಯ ನೀವಾಸಿಗಳಾದ ನೀಲಮ್ಮ ಮತ್ತು ಮೋಹನ್ ಎನ್ನುವರು ಅನುಗೌಡ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಸಾಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಸ್ಪಡಿಯಲ್ಲಿರುವ ಜಮೀನನ್ನು ಅನುಗೌಡ ಅಪ್ಪ ಅಮ್ಮ ನೋಡಿಕೊಳ್ಳುತ್ತಿದ್ದು, ಅನುಗೌಡ ಆಗಾಗ ಬೆಂಗಳೂರಿನಿಂದ ಬಂದು ಹೋಗುತ್ತಿದ್ದರು. ಆದರೆ, ಜಮೀನು ವಿವಾದ ವಿಚಾರಕ್ಕೆ ಅನುಗೌಡ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಅನುಗೌಡ ತಮಿಳು ಹಾಗೂ ಕನ್ನಡದ ಹಲವು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ಸವಿಸವಿ ನೆನಪುಮ ಭೂಗತ, ವಿಷ್ಣುವರ್ಧನ್ ಜೊತೆಗೆ ಸ್ಕೂಲ್ ಮಾಸ್ಟರ್, ಕಿಚ್ಚ ಸುದೀಪ್​ ಜೊತೆ ಕೆಂಪೇಗೌಡ ಚಿತ್ರದಲ್ಲಿ ಆ್ಯಕ್ಟ್ ಮಾಡಿದ್ದಾರೆ. ದಂಡಂ ದಶಗುಣಂ ಚಿತ್ರದಲ್ಲಿ ರಮ್ಯಾ ಸಹೋದರಿ ಪಾತ್ರದಲ್ಲಿ ನಟಿಸಿದ್ದಾರೆ.

RELATED ARTICLES
- Advertisment -
Google search engine

Most Popular