Monday, July 28, 2025
Google search engine

Homeಅಪರಾಧಕೋಲಾರದಲ್ಲಿ ಭೀಕರ ರಸ್ತೆ ಅಪಘಾತ : ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಕೋಲಾರದಲ್ಲಿ ಭೀಕರ ರಸ್ತೆ ಅಪಘಾತ : ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಕೋಲಾರ: ಬೆಳ್ಳಂ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೆ ಜಿ ಎಫ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಡೆದಿದೆ.

ಮೃತರನ್ನು ಪೌಲ್ಟ್ರಿ ಫಾರಂನಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಗೌಡ (30) ಮತ್ತು ಸಭ್ಯ (29) ಎಂದು ಗುರುತಿಸಲಾಗಿದೆ. ಬೆಳಗ್ಗೆ ಎಂದಿನಂತೆ ಕೆಲಸಕ್ಕೆಂದು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ.

ಕೆ. ಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆಯುತ್ತಿದ್ದಂತೆ ನೆಲಕ್ಕೆ ಬಿದ್ದ ಅಭಿಷೇಕ್ ಹಾಗೂ ಸಭ್ಯ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಪಟ್ಟಂತೆ ಬೇತಮಂಗಲ ಠಾಣೆ ಪೋಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

RELATED ARTICLES
- Advertisment -
Google search engine

Most Popular