Monday, April 21, 2025
Google search engine

Homeರಾಜಕೀಯಫೆ. 17ರಂದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಸಮಾವೇಶ

ಫೆ. 17ರಂದು ಮಂಗಳೂರಿನಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಸಮಾವೇಶ

ಮಂಗಳೂರು: ಕಾರ್ಯಕರ್ತರನ್ನು ಒಗ್ಗೂಡಿಸಲು ಹಾಗೂ ಲೋಕಸಭಾ ಚುನಾವಣೆಗೆ ಸಿದ್ಧತೆಯಾಗಿ ಫೆ. 17ರಂದು ಅಡ್ಯಾರ್‌ ನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ರಾಜ್ಯ ಮಟ್ಟದ ಕಾಂಗ್ರೆಸ್‌ ಸಮಾವೇಶ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಮಧ್ಯಾಹ್ನ 2 ಗಂಟೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಸಮಾವೇಶ ಆರಂಭಗೊಳ್ಳಲಿದೆ. ಕಾಂಗ್ರೆಸ್‌ ನ ರಾಜ್ಯ ಉಸ್ತುವಾರಿ ರಣದೀಪ್‌ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖಂಡರಾದ ರೋಜಿ ಜಾನ್‌, ಸಲೀಂ ಅಹ್ಮದ್‌, ರಾಜ್ಯದ ಸಚಿವರು, ಪಕ್ಷದ ಶಾಸಕರು, ರಾಜ್ಯದ ಎಲ್ಲ ಜಿಲ್ಲೆಗಳ ಅಧ್ಯಕ್ಷರು, ಬ್ಲಾಕ್‌, ಗ್ರಾ.ಪಂ. ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಸೇರಿದಂತೆ 25 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕಾರ್ಯಕರ್ತರ ಭಾಗವಹಿಸುವಿಕೆಯೊಂದಿಗೆ ಕಾರ್ಯಕ್ರಮದ ಯಶಸ್ಸಿಗಾಗಿ ಈಗಾಗಲೇ ಏಳು ಸಮಿತಿಗಳನ್ನು ರಚಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಜಿಲ್ಲೆಯ ಘಟಕಗಳ ಮುಖ್ಯಸ್ಥ ಜತೆ ಸರಣಿ ಸಭೆ ನಡೆಸಲಿದ್ದಾರೆ. ಫೆ. 11ರಂದು ಸಲೀಂ ಅಹ್ಮದ್‌, ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರನ್ನು ಒಗ್ಗೂಡಿಸುವ ಕಾರ್ಯ ನಡೆಯಲಿದೆ ಎಂದು ವಿವರಿಸಿದರು.

ಜಿಲ್ಲಾ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್‌, ಮನಪಾ ಸದಸ್ಯ ನವೀನ್‌ ಡಿ’ಸೋಜಾ, ಪ್ರಮುಖರಾದ ಮನೋರಾಜ್‌ ರಾಜೀವ್‌, ನೀರಜ್‌ ಪಾಲ್‌, ಶುಭೋದಯ ಆಳ್ವ, ಟಿ.ಕೆ. ಸುಧೀರ್‌, ಲಾರೆನ್ಸ್‌ ಡಿ ಸೋಜಾ, ಪೂರ್ಣೇಶ್‌ ಭಂಡಾರಿ, ಗಣೇಶ್‌ ಪೂಜಾರಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular