ರಾಮನಗರ: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಇದೇ ಫೆ. ೨೬ ಮತ್ತು ೨೭ ರಂದು ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ರಾಜ್ಯ ಮಟ್ಟದ ಬೃಹತ್ ಉದ್ಯೋಗ ಮೇಳ ಹಾಗೂ ಯುವ ಸಮೃದ್ಧಿ ಸಮ್ಮೇಳನವನ್ನು ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಇಲಾಖೆಯ ಸಚಿವರ ನೇತೃತ್ವದಲ್ಲಿ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಐ.ಟಿ.ಐ, ಡಿಪ್ಲೋಮೊ, ಪದವಿ, ಪದವಿ ಪೂರ್ವ, ಇಂಜಿನಿಯರಿಂಗ್ ಮತ್ತು ಸ್ನಾತಕೋತ್ತರ ಪದವಿ ಇತ್ಯಾದಿ ಕೋರ್ಸುಗಳಲ್ಲಿ ಅರ್ಹರಿರುವ ಅಭ್ಯರ್ಥಿಗಳಿಗೆ ಸೂಕ್ತವಾದ ಉದ್ಯೋಗವಕಾಶಗಳನ್ನು ಒದಗಿಸಲು ಹಿತದೃಷ್ಠಿಯಿಂದ ೫೦೦ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ.
ಈ ಮೇಳದಲ್ಲಿ ಹೆಚ್ಚಿನ ಉದ್ಯೋಗದಾತರು ಕೂಡ ನೋಂದಾಯಿಸಿಕೊಂಡು ನಿರುದ್ಯೋಗಿಗಳಿಗೆ ಉದ್ಯೋಗವಕಾಶವನ್ನು ಒದಗಿಸಲು ಸಹಕರಿಸಬೇಕು. ಈ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಹೆಚ್ಚಿನ ರೀತಿಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕರ್ನಾಟಕ ಕೌಶಲ್ಯಭಿವೃದ್ಧಿ ನಿಗಮದ ವತಿಯಿಂದ ಆಯೋಜಿಸಿರುವ ಉದ್ಯೋಗಮೇಳಕ್ಕೆ ಆಗಮಿಸುವ ಅಭ್ಯರ್ಥಿಗಳು ತಮ್ಮಪೂರ್ಣ ಮಾಹಿತಿಯನ್ನು ನಲ್ಲಿ ನೋಂದಾವಣೆ ಮಾಡಿಕೊಂಡು ಖುದ್ದಾಗಿ ಉದ್ಯೋಗಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.