ಚಾಮರಾಜನಗರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2023-24ನೇ ಸಾಲಿನ ಯಳಂದೂರು ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಫೆಬ್ರವರಿ 6ರಂದು ಯಳಂದೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಏರ್ಪಡಿಸಲಾಗಿದೆ.
ಪುರುಷರಿಗೆ ವಾಲಿಬಾಲ್ (12 ಮಂದಿ), ಖೋ-ಖೋ (12 ಮಂದಿ) ಹಾಗೂ ಹಗ್ಗಜಗ್ಗಾಟ (7 ಮಂದಿ) ಮತ್ತು ಮಹಿಳೆಯರಿಗೆ ಥ್ರೋಬಾಲ್ (12 ಮಂದಿ), ಖೋ-ಖೋ (12 ಮಂದಿ) ಹಾಗೂ ಹಗ್ಗಜಗ್ಗಾಟ (7 ಮಂದಿ) ಸ್ಪರ್ಧೆಗಳನ್ನು ನಡೆಸಲಾಗುವುದು. ಕ್ರೀಡಾಕೂಟದಲ್ಲಿ ಗ್ರಾಮೀಣ ಪ್ರದೇಶದ ಶಾಲಾ ಕಾಲೇಜು ವಿದ್ಯಾರ್ಥಿಗಳು, ಯುವಕ/ಯುವತಿ ಸಂಘಗಳು ಮತ್ತು ಪುರುಷ/ಮಹಿಳಾ ಸಂಘಗಳ ಸದಸ್ಯರು ಭಾಗವಹಿಸಬಹುದು. ಸ್ಪರ್ಧೆಗಳಲ್ಲಿ ಭಾಗವಹಿಸುವವರು ನಿಗದಿಪಡಿಸಿರುವ ದಿನಾಂಕದಂದು ಸಂಘಟಕರಲ್ಲಿ ಬೆಳಿಗ್ಗೆ 9 ಗಂಟೆಗೆ ವರದಿ ಮಾಡಿಕೊಳ್ಳಬೇಕು.
ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಮಧ್ಯಾಹ್ನದ ಉಪಹಾರ ಹಾಗೂ ವಿಜೇತರಿಗೆ ಪ್ರಶಸ್ತಿ ಪತ್ರ, ಮೆಡಲ್ ಹಾಗೂ ಟ್ರೋಫಿಗಳನ್ನು ನೀಡಲಾಗುವುದು. ಕ್ರೀಡಾಪಟುಗಳಿಗೆ ಇಲಾಖಾ ವತಿಯಿಂದ ಯಾವುದೇ ಪ್ರಯಾಣ ಭತ್ಯೆ ನೀಡಲಾಗುವುದಿಲ್ಲ. ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದವರು ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಾಗಲಿದ್ದಾರೆ. ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ ನಡೆಯುವ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಜಿಲ್ಲಾ ಮಟ್ಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಮಧ್ಯಾಹ್ನದ ಉಪಹಾರ ಹಾಗೂ ಪ್ರಯಾಣ ಭತ್ಯೆಯನ್ನು ಇಲಾಖಾ ವತಿಯಿಂದ ನೀಡಲಾಗುವುದು.ಭಾಗವಹಿಸುವವರು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ತರಬೇಕು.
ಯಳಂದೂರು ತಾಲೂಕಿನ ಕ್ರೀಡಾಪಟುಗಳು ಮಾತ್ರ ಭಾಗವಹಿಸಲು ಅರ್ಹರಿರುತ್ತಾರೆ. ತಾಲೂಕು ಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಇಲಾಖೆ ವತಿಯಿಂದ ನೀಡುವ ಗುರುತಿನ ಚೀಟಿಯನ್ನು ಪಡೆದು ಇತ್ತೀಚಿನ ಭಾವಚಿತ್ರವನ್ನು ಲಗತ್ತಿಸಿ ಹಾಗೂ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಿ ಜಿಲ್ಲಾ ಮಟ್ಟಕ್ಕೆ ತರಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ದೂ ಸಂ. 08226-224932 ಅಥವಾ ಮೊ.ಸಂ 9916466659, 9844160841, 9945615695, 9880211027 ಅನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.