Friday, April 4, 2025
Google search engine

Homeಅಪರಾಧಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗಳನ್ನು ಕೊಲೆಗೈದು ಪತ್ನಿ ಆತ್ಮಹತ್ಯೆ

ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗಳನ್ನು ಕೊಲೆಗೈದು ಪತ್ನಿ ಆತ್ಮಹತ್ಯೆ

ಬೆಂಗಳೂರು: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತ್ನಿ 5 ವರ್ಷದ ಮಗಳನ್ನು ಕೊಲೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಗಲಗುಂಟೆಯಲ್ಲಿ ನಡೆದಿದೆ.

ಶೃತಿ (33) ಆತ್ಮಹತ್ಯೆ ಮಾಡಿಕೊಂಡ ಪತ್ನಿ. ಪಾವಘಡದ ಗುಂಡಾರನಹಳ್ಳಿ ಗ್ರಾಮಪಂಚಾಯ್ತಿ ಅಧ್ಯಕ್ಷೆಯಾಗಿದ್ದ ಶೃತಿ ಮಗಳು ರೋಶಿಣಿಯನ್ನು (5) ಫ್ಯಾನ್‌ಗೆ ನೇಣು ಹಾಕಿ ಬಳಿಕ ಅದೇ ಫ್ಯಾನಿಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶೃತಿ, ಈ ಹಿಂದೆ ಪಂಚಾಯತ್ ಕಚೇರಿಯಲ್ಲಿ ಆಡಿಟಿಂಗ್ ಕೆಲಸ ಮಾಡುತ್ತಿದ್ದ ಗೋಪಾಲಕೃಷ್ಣನನ್ನ ಪ್ರೀತಿಸಿ ಹತ್ತು ವರ್ಷಗಳ ಹಿಂದೆ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಭಾನುವಾರ ಸಂಜೆ ಪತಿ ಮನೆಯಿಂದ ಹೊರಗಡೆ ಹೋಗಿದ್ದ ಸಂದರ್ಭ ಶೃತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗ ಮನೆಯ ಹೊರಗಡೆ ಆಟವಾಡುತ್ತಿದ್ದ. ಮಗ ಮನೆಯೊಳಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.

ಗಂಡ ಗೋಪಾಲಕೃಷ್ಣನ ಅಕ್ರಮ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಶೃತಿ ಡೆತ್ ನೋಟ್ ಬರೆದಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದೆ. ಸ್ಥಳಕ್ಕೆ ಬಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಮುಗಿಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಪೊಲೀಸರು ಒಪ್ಪಿಸಿದ್ದಾರೆ. ಸದ್ಯ ಪತಿಯನ್ನು ವಶಕ್ಕೆ ಪಡೆದ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES
- Advertisment -
Google search engine

Most Popular