ಮಂಡ್ಯ : ಪಟ್ಟಣದ ಆರೋಗ್ಯ ಇಲಾಖೆ ವಸತಿ ಗೃಹದಲ್ಲಿ ಈಚೆಗೆ ನಡೆದಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದ ಮೇರೆಗೆ ಮತ್ತಿಬ್ಬರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ ೬ಕ್ಕೇರಿದೆ.
ತಾಲ್ಲೂಕಿನ ಸುಂಕಾತೊಣ್ಣೂರು ಗ್ರಾಮದ ನವೀನ್ ಕುಮಾರ್, ಮೈಸೂರು ತಾಲ್ಲೂಕಿನ ಡಿ.ಸಾಲುಂಡಿ ಗ್ರಾಮದ ಕುಮಾರ್ ಬಂಧಿತರು.
ನವೀನ್ ಕುಮಾರ್ ಹಿಂದೆ ಕೂಡ ಹೆಣ್ಣು ಭ್ರೂಣ ಹತ್ಯೆ ಪ್ರಕರಣದ ಆರೋಪಿಯಾಗಿ ಬಂಧಿತನಾಗಿದ್ದ. ಜಾಮೀನಿನ ಮೇಲೆ ಹೊರಬಂದು ಮತ್ತೆ ಕೃತ್ಯ ಮುಂದುವರಿಸಿದ್ದ. ಚಾಲಕನಾಗಿರುವ ಈತ ಗರ್ಭಪಾತ ಮಾಡಿಸಿಕೊಳ್ಳುವವರನ್ನು ರಹಸ್ಯ ಸ್ಥಳಕ್ಕೆ ಕರೆದೊಯ್ಯುತ್ತಿದ್ದ. ಗಾರೆ ಕೆಲಸ ಮಾಡುತ್ತಿದ್ದ ಕುಮಾರ್ ಪ್ರಕರಣದಲ್ಲಿ ಮಾಹಿತಿದಾರನಾಗಿ ಕೆಲಸ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.