ಬೆಂಗಳೂರು: ನಗರದ ಸದಾಶಿವನಗರದ ಸ್ಯಾಂಕಿ ಕೆರೆಯಲ್ಲಿ 20 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತಳನ್ನು ಚಿಕ್ಕಬಾಣವರ ಮೂಲದ ತೇಜು (20) ಎಂದು ಗುರುತಿಸಲಾಗಿದೆ. ಘಟನೆ ಕುರಿತು ಮಾಹಿತಿ ಪಡೆದ ಸದಾಶಿವನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಹೊರತೆಗೆದಿದ್ದಾರೆ.
ಮೇಲ್ನೋಟಕ್ಕೆ ಪ್ರೀತಿ ವಿಚಾರವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆತ್ಮಹತ್ಯೆಗೂ ಮುನ್ನ ತೇಜು ತನ್ನ ಗೆಳೆಯನಿಗೆ “ನನಗೆ ಜೀವನ ಸಾಕಾಗಿದೆ” ಎಂದು ಸಂದೇಶ ಕಳುಹಿಸಿ, ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಳು ಎನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.



