ಗುಂಡ್ಲುಪೇಟೆ: ಪಟ್ಟಣದಲ್ಲಿರುವ ಶ್ರೀ ಕಾಳಿಕಾಂಬ ಕಮಟೇಶ್ವರ ದೇವಾಲಯದಲ್ಲಿ ಭೀಮನ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಹಾಗೂ ಕಾಳಿಕಾಂಬ ದೇವರ ಉತ್ಸವ ಮೆರವಣಿಗೆ ವಿಜೃಂಭಣೆಯಿಂದ ನಡೆಯಿತು.
ವಿಶೇಷ ಪೂಜೆಯ ಹಿನ್ನೆಲೆಯಲ್ಲಿ ದೇವಾಲಯವನ್ನು ತಳಿರು ತೋರಣ ಹಾಗೂ ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು. ಅಲಂಕೃತ ವಾಹನದಲ್ಲಿ ಮಂಟಪವನ್ನಿಟ್ಟು ದೇವಿಯ ಉತ್ಸವ ಮೂರ್ತಿಯನ್ನು ವೀರಗಾಸೆ, ಮಂಗಳವಾದ್ಯ ಹಾಗೂ ಕಂಸಾಳೆ ಮತ್ತು ಇತರೆ ಜನಪದ ಕಲಾತಂಡದೊಂದಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮಾಡಲಾಯಿತು.
ಈ ವೇಳೆ ವಿಶ್ವಕರ್ಮ ಸಮುದಾಯದ ಮುಖಂಡರು, ಯುವಕರು ಹಾಜರಿದ್ದರು.