ಮಂಡ್ಯ: ಭ್ರೂಣ ಹತ್ಯೆ ಪ್ರಕರಣವನ್ನು ಭೇದಿಸಿದ ಪೊಲೀಸರ ಕಾರ್ಯಕ್ಕೆ ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ನಂತರ ಮಂಡ್ಯದಲ್ಲಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ದುದ್ದ ವ್ಯಾಪ್ತಿಯಲ್ಲಿ ಭ್ರೂಣ ಹತ್ಯೆ ಪ್ರಕರಣ ಪತ್ತೆಯಾಗಿತ್ತು. ಕಳೆದ ಒಂದು ವರ್ಷದಿಂದ ಈ ಭ್ರೂಣ ಹತ್ಯೆ ನಡೆಯುತ್ತಿದೆ. ಈಗಾಗಲೇ ಆರೋಪಿಗಳನ್ನ ಪೊಲೀಸರು ಯಶಸ್ವಿಯಾಗಿ ಬಂಧಿಸಿದ್ದಾರೆ. ಅವರ ಕಾರ್ಯಕ್ಕೆ ಧನ್ಯವಾದಗಳು. ಈ ರೀತಿಯ ಪ್ರಕರಣಗಳಿಂದ ಹೆಣ್ಣು ಮಕ್ಕಳ ಸಂಖ್ಯೆ ಕುಸಿತವಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು. ಈ ಕೃತ್ಯದಲ್ಲಿ ಭಾಗಿಯಾಗಿದ್ದ 36 ಜನರನ್ನ ಪೊಲೀಸರು ಬಂಧಿಸಿದ್ದಾರೆ. ಅದಕ್ಕಾಗಿ ಸರ್ಕಾರ ಒಂದು ತಂಡ ರಚಿಸಿ ಭ್ರೂಣ ಹತ್ಯೆ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ಪೊಲೀಸರು ಇನಷ್ಟು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಹೇಳಿದ್ದಾರೆ .