ಹನೂರು: ಹನೂರು ತಾಲ್ಲೂಕು ಕ್ರಿಕೆಟ್ ಕ್ಲಬ್ (ರಿ) ವತಿಯಿಂದ ಹನೂರು ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ್ ರವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಮಂಗಳವಾರದಂದು ಹನೂರು ಪಟ್ಟಣದ ಮಲೆಮಹದೇಶ್ವ ಕ್ರೀಡಾಂಗಣದಲ್ಲಿ ಹನೂರು ತಾಲ್ಲೂಕು ಕ್ರಿಕೆಟ್ ಕ್ಲಬ್ (ರಿ)ವತಿಯಿಂದ ಸನ್ಮಾನವನ್ನು ಸ್ವೀಕರಿಸಿದ ಬಳಿಕ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜ್, ಹನೂರು ತಾಲೂಕು ಕೇಂದ್ರದಲ್ಲಿ ಕ್ರಿಕೆಟ್ ಕ್ಲಬ್ ಒಂದು ನೋಂದಣಿಯಾದ ಕೆಲ ದಿನಗಳಲ್ಲಿ ಕ್ರೀಡಾ ಪ್ರತಿಭೆಗಳನ್ನು ಹೊರತರುವ ಉದ್ದೇಶದಿಂದ ಅನೇಕ ಕಾರ್ಯಕ್ರಮಗಳು ಹಾಗೂ ಸಾಮಾಜಿಕ ಕಾರ್ಯಗಳನ್ನು ಆಯೋಜಿಸಿ ಕಾರ್ಯನಿರ್ವಹಿಸುತ್ತಿರುವುದು ಉತ್ತಮ ಬೆಳವಣಿಗೆ. ಹನೂರು ತಾಲ್ಲೂಕಿನಲ್ಲಿ ಈ ಕ್ಲಬ್ ಸದಾ ಆಕಾಶದಲ್ಲಿರುವ ನಕ್ಷತದಂತೆ ಮಿನುಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಹನೂರು ತಾಲ್ಲೂಕು ಕ್ರಿಕೆಟ್ ಕ್ಲಬ್ ಗೌರವಾಧ್ಯಕ್ಷ ಮನ್ಸೂರ್, ಅಧ್ಯಕ್ಷ ಅಭಿಲಾಷ್ ಗೌಡ, ದೈಹಿಕ ಪರಿವಿಕ್ಷಕ ಮಹದೇವ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಶಿಕ್ಷಣ ಸಂಯೋಜಕರಾದ ಕಂದವೇಲು, ಕಿರಣ್, ಚಿನ್ನಪ್ಪಯ್ಯ ಸೇರಿದಂತೆ ಇನ್ನಿತರರು ಹಾಜರಿದ್ದರು.