Thursday, April 3, 2025
Google search engine

Homeರಾಜ್ಯಮುಸಲ್ಮಾನರಿಗೆ ಕಾಮಗಾರಿಯಲ್ಲಿ ಮೀಸಲಾತಿ ವಿರುದ್ಧ ಉಗ್ರ ಹೋರಾಟ: ಬಿ.ವೈ. ವಿಜಯೇಂದ್ರ

ಮುಸಲ್ಮಾನರಿಗೆ ಕಾಮಗಾರಿಯಲ್ಲಿ ಮೀಸಲಾತಿ ವಿರುದ್ಧ ಉಗ್ರ ಹೋರಾಟ: ಬಿ.ವೈ. ವಿಜಯೇಂದ್ರ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು, ಎಲ್ಲ ವರ್ಗದಲ್ಲೂ ಬಡವರಿದ್ದಾರೆ. ಹಿಂದೂಗಳಲ್ಲೂ ಕೂಡ ಬಡವರಿದ್ದಾರೆ.

ಮುಸಲ್ಮಾನರಿಗೆ ಸರಕಾರಿ ಕಾಮಗಾರಿಗಳಲ್ಲಿ ಶೇ 4 ಮೀಸಲಾತಿ ಕೊಡುವುದಾದರೆ ಹಿಂದೂಗಳೇನು ಅಪರಾಧ ಮಾಡಿದ್ದಾರೆ. ಹಿಂದೂಗಳಲ್ಲಿ ಹಾಗಿದ್ದರೆ ಬಡವರಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ಬಿಜೆಪಿಯ ನಿಲುವು ಸ್ಪಷ್ಟವಾಗಿದೆ. ಶೇ 4 ಮೀಸಲಾತಿ ಕುರಿತ ಮಸೂದೆಯನ್ನು ಸದನದಲ್ಲಿ ತಂದಾಗ ಸದನದ ಒಳಗೆ ಮತ್ತು ಹೊರಗಡೆ ಬಿಜೆಪಿ ಉಗ್ರ ಹೋರಾಟ ಮಾಡಲಿದೆ; ಪ್ರತಿಭಟನೆ ಮಾಡುತ್ತೇವೆ. ಇದನ್ನು ಅನುಷ್ಠಾನಗೊಳಿಸಲು ನಾವು ಅವಕಾಶ ಕೊಡುವುದಿಲ್ಲ ಎಂದು ಎಚ್ಚರಿಸಿದರು.

ಪ್ರಶ್ನೆಗೆ ಉತ್ತರ ಕೊಟ್ಟ ಅವರು, ಡಿ.ಕೆ.ಶಿವಕುಮಾರ್ ಅವರು ಹಿರಿಯರಿದ್ದಾರೆ. ಕುವೆಂಪು ಅವರ ನಾಡಗೀತೆಯನ್ನು ನೆನಪಿಸಿಕೊಂಡಿದ್ದಾರೆ. ಸರ್ವ ಜನಾಂಗದ ಶಾಂತಿಯ ತೋಟದ ನೆನಪನ್ನು ಅವರು ಮಾಡಿಕೊಟ್ಟಿದ್ದಾರೆ. ಕಾಂಗ್ರೆಸ್ ಸರಕಾರವು ರಾಜ್ಯದಲ್ಲಿ ಸರ್ವ ಜನಾಂಗದ ಶಾಂತಿಯ ತೋಟಕ್ಕೆ ವಿಷಬೀಜವನ್ನು ಬಿತ್ತುವ ಕೆಲಸವನ್ನು ಮಾಡುತ್ತಿದೆ ಎಂಬುದನ್ನು ಡಿ.ಕೆ.ಶಿವಕುಮಾರ್ ಅವರಿಗೆ ತಿಳಿಸಬಯಸುವುದಾಗಿ ಹೇಳಿದರು.

ಸರಕಾರಿ ಗುತ್ತಿಗೆಗಳಲ್ಲಿ ಕಾಮಗಾರಿಯ ಶೇ 4ರಷ್ಟು ಮೀಸಲಾತಿಯನ್ನು ಮುಸ್ಲಿಮರಿಗೆ ಕೊಡುವುದಾಗಿ ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ಸಚಿವಸಂಪುಟ ಸಭೆಯಲ್ಲಿ ಇದನ್ನು ಅನುಮೋದಿಸಿದ್ದಾರೆ. ಸದನದಲ್ಲಿ ಮಸೂದೆ ತರಲು ಮುಂದಾಗಿದ್ದಾರೆ. ಇದನ್ನು ಬಿಜೆಪಿ ಸ್ಪಷ್ಟವಾಗಿ ವಿರೋಧಿಸುತ್ತದೆ ಎಂದು ತಿಳಿಸಿದರು.

ಬಿಜೆಪಿ ಮುಸಲ್ಮಾನರ ವಿರೋಧಿಗಳಲ್ಲ. ಆದರೆ, ಅಲ್ಪಸಂಖ್ಯಾತರ ಅಥವಾ ಮುಸಲ್ಮಾನರ ತುಷ್ಟೀಕರಣದ ರಾಜಕೀಯ ನೀತಿಯನ್ನು ಕಾಂಗ್ರೆಸ್ ಸರಕಾರ ಅನುಸರಿಸುತ್ತಿದ್ದು, ಇದನ್ನು ನಾವು ಗಟ್ಟಿಯಾಗಿ ವಿರೋಧಿಸುತ್ತೇವೆ. ಮುಸಲ್ಮಾನರಿಗೆ ಎಂಎಲ್‍ಸಿ ಮಾಡಿ, ರಾಜ್ಯಸಭಾ ಸದಸ್ಯತ್ವ ಕೊಡಿ ಎಂದು ನಿನ್ನೆ ಡಿ.ಕೆ.ಶಿವಕುಮಾರ್ ಅವರು ಸವಾಲು ಹಾಕಿದ್ದಾರೆ.

RELATED ARTICLES
- Advertisment -
Google search engine

Most Popular