Monday, December 2, 2024
Google search engine

Homeಅಪರಾಧಗುಂಡು ಹಾರಿಸಿ ನಿರ್ದೇಶಕನ ಹತ್ಯೆಗೆ ಯತ್ನಿಸಿದ ಸಿನಿಮಾ ನಟನ ಬಂಧನ

ಗುಂಡು ಹಾರಿಸಿ ನಿರ್ದೇಶಕನ ಹತ್ಯೆಗೆ ಯತ್ನಿಸಿದ ಸಿನಿಮಾ ನಟನ ಬಂಧನ

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ಭರತ್ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನಿಸಿದ ಆರೋಪದ ಮೇಲೆ ನಟ ತಾಂಡವ್ ರಾಮ್ ರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಚಂದ್ರಾ ಲೇ ಔಟ್​ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ತಾಂಡವ್ ರಾಮ್ ಅನ್ನು ಪೊಲೀಸರು ಬಂಧಿಸಿದ್ದಾರೆ. ತಾಂಡವ್ ರಾಮ್ ಕೆಲ ಧಾರಾವಾಹಿಗಳು ಹಾಗೂ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ನಿರ್ದೇಶನ ಮಾಡುತ್ತಿದ್ದ ಸಿನಿಮಾವನ್ನು ಅರ್ಧಕ್ಕೆ ನಿಲ್ಲಿಸಿದ ಕಾರಣಕ್ಕೆ ಕೋಪಗೊಂಡು ನಟ ತಾಂಡವ ರಾಮ್ ನಿರ್ದೇಶಕ ಭರತ್ ಅವರ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ .

ಮುಗಿಲ್ ಪೇಟೆ ಸಿನಿಮಾದ ನಿರ್ದೇಶಕ ಭರತ್, ಇದೀಗ ಸಿನಿಮಾ ಒಂದನ್ನು ನಿರ್ದೇಶಿಸುತ್ತಿದ್ದು, ಸಿನಿಮಾದಲ್ಲಿ ತಾಂಡವ್ ರಾಮ್ ನಟಿಸುತ್ತಿದ್ದರು. ಆದರೆ ಆ ಸಿನಿಮಾವನ್ನು ಭರತ್ ನಿಲ್ಲಿಸಿದ್ದರು. ಇದರಿಂದ ಕೋಪಗೊಂಡಿದ್ದ ತಾಂಡವ್ ರಾಮ್, ನಿರ್ದೇಶಕ ಭರತ್ ​ಗೆ ಲೈಸೆನ್ಸ್ ಹೊಂದಿರುವ ಗನ್ ತೋರಿಸಿ ಬೆದರಿಕೆ ಹಾಕಿದ್ದಾರೆ. ಜೊತೆಗೆ ಒಂದು ಸುತ್ತು ಗುಂಡು ಹಾರಿಸಿ ಕೊಲ್ಲುವ ಯತ್ನ ಮಾಡಿದ್ದಾರೆ. ಭರತ್ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದು, ಆರೋಪಿ ತಾಂಡವ್ ರಾಮ್ ಅನ್ನು ಬಂಧಿಸಲಾಗಿದೆ.

RELATED ARTICLES
- Advertisment -
Google search engine

Most Popular