Friday, April 4, 2025
Google search engine

Homeರಾಜ್ಯಎನ್ ಹೆಚ್ ಎಂ ನೌಕರರ ಪ್ರತಿಭಟನಾ ಸ್ಥಳಕ್ಕೆ ಛಲವಾದಿ ನಾರಾಯಣಸ್ವಾಮಿ ಭೇಟಿ

ಎನ್ ಹೆಚ್ ಎಂ ನೌಕರರ ಪ್ರತಿಭಟನಾ ಸ್ಥಳಕ್ಕೆ ಛಲವಾದಿ ನಾರಾಯಣಸ್ವಾಮಿ ಭೇಟಿ

ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದಂತ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸದನದಲ್ಲಿ ವಿಷಯ ಪ್ರಸ್ತಾಪಿಸುವುದಾಗಿ ಭರವಸೆ ನೀಡಿದರು.

ಕಳೆದ ಮೂರು ದಿನಗಳಿಂದ ತಮ್ಮ ಹುದ್ದೆ ಖಾಯಂ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿದಂತೆ ಸೇವಾ ಭದ್ರತೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಗುತ್ತಿಗೆ ಶುಶ್ರೂಷಾಧಿಕಾರಿಗಳ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಅಹೋರಾತ್ರಿ ಪ್ರತಿಭಟನೆ ನಡೆಸಲಾಗುತ್ತಿದೆ. ಇಂದಿಗೆ ಎನ್ ಹೆಚ್ ಎಂ ಗುತ್ತಿಗೆ ನೌಕರರ ಪ್ರತಿಭಟನೆ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಇಂದು ಪ್ರತಿಭಟನಾ ಸ್ಥಳಕ್ಕೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಭೇಟಿ ನೀಡಿ, ನೌಕರರ ಸಮಸ್ಯೆ ಆಲಿಸಿದರು. ಅಲ್ಲದೇ ಮುಂಬರುವಂತೆ ವಿಧಾನಮಂಡಲದ ಅಧಿವೇಶನದಲ್ಲಿ ಗುತ್ತಿಗೆ ನೌಕರರ ಬೇಡಿಕೆ ಈಡೇರಿಕೆ ಕುರಿತಂತೆ ಚರ್ಚಿಸುವುದಾಗಿ ಭರವಸೆ ನೀಡಿದರು.

RELATED ARTICLES
- Advertisment -
Google search engine

Most Popular