Friday, April 4, 2025
Google search engine

Homeಅಪರಾಧಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ FIR ದಾಖಲು

ಬೆಂಗಳೂರು : ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಪ್ರಕರಣ ಸಂಬಂಧ ಎಸಿಪಿ ಚಂದನ್ ಗೆ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು ದಾಖಲಾಗಿದೆ.

ಪುನೀತ್ ಕೆರೆಹಳ್ಳಿ ಬಿಡುಗಡೆ ಬೆನ್ನಲ್ಲೇ ಟ್ವೀಟ್ ಮಾಡಿದ್ದ ಪ್ರತಾಪ್ ಸಿಂಹ, ಸಹೋದರ ಪುನೀತ್ ಕೆರೆಹಳ್ಳಿ ಬಿಡುಗಡೆ ಆಗಿದ್ದಾನೆ. ಆತನನ್ನು ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿರುವ ಎಸಿಪಿ ಚಂದನ್ ಸ್ಟೇಷನ್ ಗೆ ಬರ್ತೀನಿ, ನೀವು ಇರಬೇಕು ಎಂದು ಹೇಳಿದ್ದರು.ಈ ಹಿನ್ನೆಲೆ ಪ್ರತಾಪ್ ಸಿಂಹ ವಿರುದ್ಧ ಎಸಿಪಿ ಚಂದನ್ ಕುಮಾರ್ ದೂರು ದಾಖಲಿಸಿದ್ದಾರೆ.

ಎಸಿಪಿ ಚಂದನ್ ಕೆಲ ಸಮಯಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ಕೊಲೆ ಪ್ರಕರಣದ ಸಂಬಂಧ ನಟ ದರ್ಶನ್ ಅವರನ್ನು ಬಂಧಿಸಿದ್ದರು. ಎಸಿಪಿ ಚಂದನ್ ಪ್ರಕರಣದ ತನಿಖಾಧಿಕಾರಿಯಾಗಿದ್ದು ಯಾವುದೇ ಒತ್ತಡಗಳಿಗೂ ಮಣಿಯದೇ ಕರ್ತವ್ಯ ನಿರ್ವಹಿಸಿ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ಪ್ರತಾಪ್ ಸಿಂಹ ಅವರು ಎಸಿಪಿ ಚಂದನ್ ವಿರುದ್ಧ ಪುನೀತ್ ಕೆರೆಹಳ್ಳಿಗೆ ಠಾಣೆಯಲ್ಲಿ ಬೆತ್ತಲೆಗೊಳಿಸಿ ಹಿಂಸೆ ನೀಡಿರುವ ಆರೋಪ ಹೊರಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರವಿರೋಧ ಚರ್ಚೆ ನಡೆದಿದೆ.

ಪ್ರತಾಪ್ ಸಿಂಹ ಸಮಾಜಘಾತುಕನ ಪರವಹಿಸಿ ಆತನನ್ನು ಸಹೋದರ ಎಂದಿರುವುದಕ್ಕೆ ಆಕ್ಷೇಪ ವ್ಯಕ್ತವಾಗಿದೆ. ದಕ್ಷ ಅಧಿಕಾರಿ ಚಂದನ್ ಮೇಲೆ ಸುಳ್ಳು ಆರೋಪ ಹೊರಿಸುತ್ತಿದ್ದಾರೆ ಮತ್ತು ಅವರಿಗೆ ಬೆದರಿಕೆ ರೂಪದಲ್ಲಿ ಪ್ರತಾಪ್ ಸಿಂಹ ಪೋಸ್ಟ್ ಮಾಡಿದ್ದಾರೆ ಎಂದು ವಿರೋಧ ವ್ಯಕ್ತವಾಗಿದೆ. ಅಲ್ಲದೇ ದರ್ಶನ್ ಅಭಿಮಾನಿಗಳ ಬೆಂಬಲ ಗಳಿಸಲು ಎಸಿಪಿ ಚಂದನ್ ವಿರುದ್ಧ ಸುಳ್ಳಾರೋಪ ಹೊರಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

RELATED ARTICLES
- Advertisment -
Google search engine

Most Popular