Friday, April 18, 2025
Google search engine

Homeಅಪರಾಧವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್‌ಐಆರ್ ದಾಖಲು

ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್‌ಐಆರ್ ದಾಖಲು

ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್‌ಐಆರ್ ದಾಖಲಾಗಿದೆ.

ರಾತ್ರಿ ಅವಧಿಗೂ ಮೀರಿ ಪಬ್ ತೆರೆದಿದ್ದ ಹಿನ್ನೆಲೆ ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಕೊಹ್ಲಿ ಮಾಲೀಕತ್ವದ ಒನ್ ೮ ಕಮ್ಯೂನ್ ಪಬ್ ಮೇಲೆ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಸರ್ಕಾರ ನಿಗದಿಪಡಿಸಿರುವ ನಿಯಮವನ್ನು ಗಾಳಿಗೆ ತೂರಿ ತಡರಾತ್ರಿ ವರೆಗೂ ಪಬ್ ತೆರೆದು ಪಾರ್ಟಿಗೆ ಅನುವು ಮಾಡಿಕೊಟ್ಟ ರೆಸ್ಟೋರೆಂಟ್, ಬಾರ್, ಪಬ್ ವಿರುದ್ಧ ಜು.೬ರ ರಾತ್ರಿ ಕಬ್ಬನ್ ಪಾರ್ಕ್ ಠಾಣಾ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಈ ವೇಳೆ, ರಾತ್ರಿ ೧.೨೦ರವರೆಗೂ ಪಬ್ ಓಪನ್ ಮಾಡಿದ್ದ ಆರೋಪದಡಿ ನಗರದ ಕಸ್ತೂರಬಾ ರಸ್ತೆಯಲ್ಲಿರುವ ಒನ್ ೮ ಕಮ್ಯೂನ್, ಚರ್ಚ್ ಸ್ಟ್ರೀಟ್‌ನಲ್ಲಿರುವ ಎಂಪೈರ್ ರೆಸ್ಟೋರೆಂಟ್, ಬ್ರಿಗೇಡ್ ರಸ್ತೆಯಲ್ಲಿರುವ ಪಾಂಜಿಯೋ ಬಾರ್ & ರೆಸ್ಟೋರೆಂಟ್ ವ್ಯವಸ್ಥಾಪಕರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular