Sunday, April 20, 2025
Google search engine

Homeಅಪರಾಧಜೆ.ಪಿ.ನಡ್ಡಾ, ಬಿವೈ ವಿಜಯೇಂದ್ರ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್

ಜೆ.ಪಿ.ನಡ್ಡಾ, ಬಿವೈ ವಿಜಯೇಂದ್ರ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್

ಬೆಂಗಳೂರು: ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರ ವಿರುದ್ಧ ಜಾಹೀರಾತು ನೀಡಿದ್ದರಿಂದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಅಮಿತ್ ಮಾಳವಿಯಾ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಎಸ್ಸಿ, ಎಸ್ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದು, ಈ ಮೂಲಕ ಕಾಂಗ್ರೆಸ್ ವಿರುದ್ಧ ಅಪಪ್ರಚಾರ ಮಾಡಲಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ದೂರು ನೀಡಿದ್ದು, ಈ ದೂರಿನ ಮೇರೆಗೆ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಬಿಜೆಪಿಯ ಮೂವರು ನಾಯಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ವಿಡಿಯೋವೊಂದನ್ನು ಬಿಜೆಪಿ ಕರ್ನಾಟಕದ ಘಿ ಪೇಜ್ ನಲ್ಲಿ ಪೋಸ್ಟ್ ವೊಂದನ್ನು ಮಾಡಲಾಗಿದ್ದು, ಅದರಲ್ಲಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಮುಸ್ಲಿಂ ಎಂಬಂತೆ ಬಿಂಬಿಸಿ ಮೊಟ್ಟೆಯಲ್ಲಿ ಬರುವ ಮರಿಗಳನ್ನು ಬೇರೆ ಬೇರೆ ಸಮದಾಯಗಳಿಗೆ ಹೋಲಿಕೆ ಮಾಡಿದ್ದಾರೆ ಎಂದು ಕೆಪಿಸಿಸಿ ಕಾನೂನು ಘಟಕ ಆರೋಪಿಸಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿಯ ಕಾನೂನು ಘಟಕದ ರಮೇಶ್ ಬಾಬು ದೂರಿನಲ್ಲಿ ಮನವಿ ಮಾಡಿದ್ದಾರೆ.

ಜೆಪಿ ನಡ್ಡಾ, ವಿಜಯೇಂದ್ರ ಸೂಚನೆಯಂತೆ ಬಿಜೆಪಿಯ ಅಧಿಕೃತ ಖಾತೆಯಲ್ಲಿ ಅಮಿತ್ ಮಾಳವಿಯಾ ಅವರು ಪೋಸ್ಟ್ ಮಾಡಿದ್ದಾರೆ. ಚುನಾವಣಾ ನೀತಿ ಸಂಹಿತೆ ಹಾಗೂ ಚುನಾವಣಾ ಆಯೋಗದ ನಿಯಮ ಉಲ್ಲಂಘನೆ ಆರೋಪಿಸಿ ದೂರು ನೀಡಿದ ಹಿನ್ನಲೆಯಲ್ಲಿ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

RELATED ARTICLES
- Advertisment -
Google search engine

Most Popular