Thursday, April 3, 2025
Google search engine

Homeರಾಜ್ಯಸುದ್ದಿಜಾಲಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್‌ ದಾಖಲು

ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್‌ ದಾಖಲು

ಮಂಗಳೂರು: ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಮಾರ್ಚ್ 9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ ಎಂದು ಭಾಷಣ ಮಾಡಿದ್ದರು.

ಪ್ರಚೋದನಕಾರಿ ಭಾಷಣ ಮಾಡಿ,‌ ಕೋಮು ದ್ವೇಷಕ್ಕೆ ಕಾರಣರಾಗಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಮುಖಂಡ ರಶೀದ್ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ದೂರಿನ‌ ಹಿನ್ನೆಲೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

ಸೂಲಿಬೆಲೆ ಹೇಳಿದ್ದು ಏನು?
ಮತಾಂತರ ಎಂದು ಬಡಿದಾಡಿದ್ದು ಸಾಕು. ಈಗ ಹಿಂದೂ ಧರ್ಮಕ್ಕೆ ಘರ್ ವಾಪ್ಸಿ ಮಾಡೋ ಬಗ್ಗೆ ಮಾತಾಡಿ. ಎಲ್ಲಿವರೆಗೆ ಲವ್ ಜಿಹಾದ್, ಮತಾಂತರ ಬಗ್ಗೆ ಮಾತನಾಡೋದು? ಎಷ್ಟು ದಿನ ನಮ್ಮ ಹುಡುಗಿಯರನ್ನೇ ನೋಡ್ತಿಯಪ್ಪ ಅಂತ ನಮ್ಮ ಗಂಡು ಮಕ್ಕಳಿಗೆ ಕೇಳೋಣ. ಬೇರೆ ಧರ್ಮದ ಹುಡುಗಿಯರನ್ನೂ ನೋಡು ಅಂತ ಹೇಳಬೇಕು. ಅನ್ಯಧರ್ಮದ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ ಎಂದು ಹಿಂದೂ ಯುವಕರಿಗೆ ಕರೆ ನೀಡಿದ್ದರು.

ನಮ್ಮ ಸಮಾಜದಲ್ಲಿ ಹೆಣ್ಣು ಮಕ್ಕಳಿಲ್ಲ ಅನ್ನೋವಾಗ ಪಕ್ಕದ ಸಮಾಜದಲ್ಲೂ ಸಮಸ್ಯೆಯಿದೆ ಎಂದು ಧೈರ್ಯ ತುಂಬಿ. ನಾವು ಆಕ್ರಮಣಕಾರಿಯಾಗಿ ಆಡಬೇಕು, ರಕ್ಷಣಾತ್ಮಕವಾಗಿ ಆಡಿದ್ದು ಸಾಕು. ಟೆಸ್ಟ್ ಮ್ಯಾಚ್‌ಗಳು ನಿಂತು ಹೋಯ್ತು. ಈಗ ಟ್ವೆಂಟಿ ಟ್ವೆಂಟಿ ಮ್ಯಾಚ್ ಆಡೋ ಸಮಯ ಬಂದಾಗಿದೆ. ಇರುವ ಇಪ್ಪತ್ತು ಓವರ್‌ನಲ್ಲಿ ಬಡಿಬೇಕು ಅಷ್ಟೇ. ಘರ್ ವಾಪ್ಸಿ ಹೇಗೆ ಮಾಡೋದು ಅನ್ನೋದರ ಬಗ್ಗೆ ರೀಲ್ಸ್ ಮಾಡಿ. ಹಿಂದೂ ಧರ್ಮದಿಂದ ಹೋಗಿರುವವರನ್ನ ಮೊದಲು ವಾಪಸ್ ತರೋಣ ಎಂದು ಕರೆ ನೀಡಿದ್ದರು.

RELATED ARTICLES
- Advertisment -
Google search engine

Most Popular