Monday, April 21, 2025
Google search engine

Homeರಾಜ್ಯಪಚ್ಚನಾಡಿ ತ್ಯಾಜ್ಯ ಘಟಕದಲ್ಲಿ ಅಗ್ನಿ ಅವಘಡ: ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಪಚ್ಚನಾಡಿ ತ್ಯಾಜ್ಯ ಘಟಕದಲ್ಲಿ ಅಗ್ನಿ ಅವಘಡ: ಜಿಲ್ಲಾಧಿಕಾರಿ ಭೇಟಿ, ಪರಿಶೀಲನೆ

ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ಮಹಾನಗರಪಾಲಿಕೆಯ ಪಚ್ಚನಾಡಿ ತ್ಯಾಜ್ಯ ಘಟಕದಲ್ಲಿ ಬೆಂಕಿ ಉಂಟಾದ ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಭೇಟಿ ನೀಡಿ ಪರಿಶೀಲಿಸಿದರು.

ತ್ಯಾಜ್ಯ ಘಟಕದ ವಿವಿಧ ವಿಭಾಗಗಳಿಗೂ ಭೇಟಿ ನೀಡಿ ವೀಕ್ಷಿಸಿದ ಅವರು, ತ್ಯಾಜ್ಯ ನಿರ್ವಹಣೆಯ ಮಾಹಿತಿ ಪಡೆದರು.

ಮುಂದಿನ ದಿನಗಳಲ್ಲಿ ಬೆಂಕಿ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್ ಉಪಸ್ಥಿತರಿದ್ದರು.

ಇನ್ನು ಪಚ್ಚನಾಡಿ ಡಂಪಿಂಗ್ ಯಾರ್ಡ್ ನಲ್ಲಿ ಬೆಂಕಿ ಕಾಣಿಸಿ ಕೊಂಡಿದ್ದು ಅಗ್ನಿ ಶ್ಯಾಮಕ ದಳದವರಿಂದ ಬೆಂಕಿ ನಂದಿಸುವ ಕೆಲಸ ತುರ್ತಾಗಿ ಕೈಗೊಳ್ಳಲಾಗಿದ್ದು, ಮೇಯರ್ ಸುಧೀರ್ ಶೆಟ್ಟಿ ಮತ್ತು ಪಾಲಿಕೆಯ ಆಯುಕ್ತ ಆನಂದ ಸಿ.ಎಲ್ ರವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

RELATED ARTICLES
- Advertisment -
Google search engine

Most Popular