Saturday, April 19, 2025
Google search engine

Homeಅಪರಾಧಹೋಟೆಲ್ ಗ್ಯಾಲಕ್ಸಿಯಲ್ಲಿ ಬೆಂಕಿ ಅವಘಡ: ೩ ಸಾವು, ೫ ಮಂದಿಗೆ ಗಾಯ!

ಹೋಟೆಲ್ ಗ್ಯಾಲಕ್ಸಿಯಲ್ಲಿ ಬೆಂಕಿ ಅವಘಡ: ೩ ಸಾವು, ೫ ಮಂದಿಗೆ ಗಾಯ!

ನವದೆಹಲಿ: ಮುಂಬೈನ ಹೋಟೆಲ್ ಗ್ಯಾಲಕ್ಸಿಯಲ್ಲಿ ಭಾನುವಾರ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಸುದ್ದಿಸಂಸ್ಥೆ ಂಓI ವರದಿ ಮಾಡಿದೆ.

ಮುಂಬೈನ ಸಾಂತಾಕ್ರೂಜ್ ಪ್ರದೇಶದಲ್ಲಿರುವ ಹೋಟೆಲ್‌ನಲ್ಲಿ ಇಂದು ಮಧ್ಯಾಹ್ನ ೧ ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ೪ ಅಗ್ನಿಶಾಮಕ ಟೆಂಡರ್‌ಗಳು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದವು. ಬೆಂಕಿಯನ್ನು ಹತೋಟಿಗೆ ತರಲಾಗಿದ್ದು, ಕಟ್ಟಡದೊಳಗಿದ್ದವರನ್ನು ರಕ್ಷಿಸುವ ಪ್ರಯತ್ನ ನಡೆಯುತ್ತಿದೆ.

ಗ್ಯಾಲಕ್ಸಿ ಹೋಟೆಲ್‌ನಲ್ಲಿ ಮಧ್ಯಾಹ್ನ ಕಾಣಿಸಿಕೊಂಡ ಬೆಂಕಿ ಹೊತ್ತಿ ಉರಿದಿದೆ. ಸಾಂತಾಕ್ರೂಜ್ ವೆಸ್ಟ್‌ನಲ್ಲಿರುವ ವಸತಿ ಕಟ್ಟಡದ ೬ನೇ ಮಹಡಿಯಲ್ಲಿನ ಫ್ಲಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡು ೬೧ ವರ್ಷದ ವ್ಯಕ್ತಿ ಮೃತಪಟ್ಟ ವಾರದ ಬಳಿಕ ಈ ಘಟನೆ ಸಂಭವಿಸಿದೆ.

‘ಹೋಟೆಲ್ ಗ್ಯಾಲಕ್ಸಿಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ’ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

RELATED ARTICLES
- Advertisment -
Google search engine

Most Popular