Saturday, April 19, 2025
Google search engine

Homeಅಪರಾಧಕೋರಮಂಗಲದಲ್ಲಿ ಅಗ್ನಿ ಅವಘಡ

ಕೋರಮಂಗಲದಲ್ಲಿ ಅಗ್ನಿ ಅವಘಡ

ಬೆಂಗಳೂರು : ಅಡುಗೆ ಕೋಣೆಯಲ್ಲಿ ಕಾಣಿಸಿಕೊಂಡ ಬೆಂಕಿಗೆ ಪಬ್ ಆಹುತಿಯಾಗಿರುವ ಘಟನೆ ಕೋರಮಂಗಲದಲ್ಲಿ ನಡೆದಿದೆ. ಕೋರಮಂಗಲ ಸಮೀಪದ ಮಡ್ ಪೈಪ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದ ಮೇಲಂತಸ್ತು ಸಂಪೂರ್ಣ ಬೆಂಕಿಗಾಹುತಿಯಾಗಿದೆ.
ಕಟ್ಟಡದ ಮೇಲಂತಸ್ತಿನಲ್ಲಿ ಮಡ್ ಪೈಪ್ ಎಂಬ ಪಬ್ ನಡೆಸಲಾಗುತ್ತಿತ್ತು.

ಇಂದು ಮುಂಜಾನೆ ಪಬ್‌ನ ಅಡುಗೆ ಕೋಣೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡು ನೋಡುತ್ತಿದ್ದಂತೆ ಬೆಂಕಿಯ ಕೆನ್ನಾಲಿಗೆ ಇಲ್ಲಿನ ಪೀಠೋಪಕರಣಗಳಿಗೆ ವ್ಯಾಪಿಸಿದೆ. ತಕ್ಷಣ ಎಚ್ಚೆತ್ತ ಸಿಬ್ಬಂದಿ ಪಬ್‌ನಿಂದ ಹೊರಬಂದಿದ್ದಾರೆ. ಅಡುಗೆ ಮಾಡುವ ವೇಳೆ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಅಕ್ಕಪಕ್ಕದ ಕಟ್ಟಡಗಳಿಗೂ ಬೆಂಕಿ ವ್ಯಾಪಿಸುವ ಸಾಧ್ಯತೆಯಿದ್ದು, ಸ್ಥಳದಲ್ಲಿ ೪ ಅಗ್ನಿ ಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ.

RELATED ARTICLES
- Advertisment -
Google search engine

Most Popular