Sunday, April 20, 2025
Google search engine

Homeರಾಜ್ಯಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ಅವಘಡ: 50ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮ

ಪ್ಲಾಸ್ಟಿಕ್ ಗೋದಾಮಿನಲ್ಲಿ ಅಗ್ನಿ ಅವಘಡ: 50ಕ್ಕೂ ಹೆಚ್ಚು ವಾಹನಗಳು ಸುಟ್ಟು ಭಸ್ಮ

ಬೆಂಗಳೂರು: ನಗರದ ನಾಯಂಡಹಳ್ಳಿಯ ಗಂಗೋಂಡನಹಳ್ಳಿಯಲ್ಲಿದ್ದ ಪ್ಲಾಸ್ಟಿಕ್ ಗೋಡೌನ್ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗೆ ಸಂಪೂರ್ಣವಾಗಿ ಆಹುತಿಯಾಗಿದೆ.

ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ ಕೆನ್ನಾಲಿಗೆ ವ್ಯಾಪಿಸಿ ಗೋಡೌನ್ ಪಕ್ಕ ಇರಿಸಿದ್ದ ಮೂವತ್ತಕ್ಕೂ ಹೆಚ್ಚು ಆಟೋಗಳು, ಸರಕುಗಳನ್ನು ಸಾಗಿಸುವ ವಾಹನಗಳು ಸುಟ್ಟು ಹೋಗಿದೆ. ಸುದ್ದಿ ತಿಳಿದು ಕೂಡಲೇ 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಸ್ಥಳಕ್ಕೆ ಆಗಮಿಸಿ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತರಾದರು.

ರಿಜ್ವಾನ್ ಎಂಬುವವರ ಮಾಲೀಕತ್ವದ ಗೋಡೌನ್‌ ನ ಒಂದು ಭಾಗದ ಖಾಲಿ ಜಾಗದಲ್ಲಿ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು. ಇದರಿಂದಾಗಿ ವಾಹನಗಳು ಸುಟ್ಟು ಹೋಗಿವೆ. ಅಕ್ಕಪಕ್ಕದಲ್ಲೂ ಹತ್ತಾರು ಪ್ಲಾಸ್ಟಿಕ್ ಗೋಡೌನ್ ಇದ್ದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿ ವೇಗದ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.

RELATED ARTICLES
- Advertisment -
Google search engine

Most Popular