Friday, April 4, 2025
Google search engine

Homeರಾಜ್ಯಸುದ್ದಿಜಾಲಚಾಮರಾಜನಗರದ ಮಾದೇಶ್ವರ, ಕಾವೇರಿ ವನ್ಯಧಾಮಗಳಲ್ಲಿ ಅಗ್ನಿ ಅವಘಡ

ಚಾಮರಾಜನಗರದ ಮಾದೇಶ್ವರ, ಕಾವೇರಿ ವನ್ಯಧಾಮಗಳಲ್ಲಿ ಅಗ್ನಿ ಅವಘಡ

ಚಾಮರಾಜನಗರ : ಕಳೆದ ಎರಡು ದಿನಗಳ ಹಿಂದೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಇದೀಗ ಮಾದೇಶ್ವರ, ಕಾವೇರಿ ವನ್ಯಧಾಮಗಳಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಹಾಗೂ ಕಾವೇರಿ ವನ್ಯಧಾಮದಲ್ಲಿ ಅಗ್ನಿ ದುರಂತ ಸಂಭವಿಸಿದೆ.

ಮಹದೇಶ್ವರ ವನ್ಯಧಾಮದ ಹನೂರು ವಲಯ ಹೂಗ್ಯಮ ಪಿ.ಜಿ ಪಾಳ್ಯ ಅರಣ್ಯ ವಲಯದಲ್ಲಿ ಈ ಒಂದು ಬೆಂಕಿ ಕಾಣಿಸಿಕೊಂಡಿದೆ. ಕಾವೇರಿ ವನ್ಯಧಾಮದ ಕೊತ್ತನೂರು, ಅಲ್ದಾಳುಗಳಲ್ಲಿ ಬೆಂಕಿ ಅವಗಡ ಸಂಭವಿಸಿದೆ. ಬೆಂಕಿಯಿಂದಾಗಿ ನೂರಾರು ಎಕರೆಯ ಅರಣ್ಯ ಪ್ರದೇಶ ನಾಶವಾಗಿದೆ.

ಬೆಂಕಿ ನಂದಿಸಲು ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಮಾದೇಶ್ವರ ಕಾವೇರಿ ವನ್ಯಧಾಮದಲ್ಲಿ ಈ ಒಂದು ಅಗ್ನಿ ಅವಘಡಕ್ಕೆ ಕಿಡಿಗೇಡಿಗಳ ಕೃತ್ಯದ ಶಂಕೆ ವ್ಯಕ್ತವಾಗುತ್ತಿದೆ. ಕೊನೆಗೂ ಬೆಂಕಿ ನಂದಿಸುವಲ್ಲಿ ಅರಣ್ಯ ಸಿಬ್ಬಂದಿಗಳು ಯಶಸ್ವಿಯಾದರು.

RELATED ARTICLES
- Advertisment -
Google search engine

Most Popular