ರಾಯಚೂರು: ರಾಯಚೂರು ತಾಲೂಕಿನ ಯಾಪಲದಿನ್ನಿ ಗ್ರಾಮ ಪಂಚಾಯತಿ ಕಚೇರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಕಂಪ್ಯೂಟರ್ ಸೇರಿ ಸಾವಿರಾರು ರೂ. ಮೌಲ್ಯದ ವಸ್ತುಗಳು ಹಾನಿಯಾಗಿದೆ. ಮಹತ್ವದ ದಾಖಲೆಗಳು ಭಸ್ಮವಾಗಿವೆ.
ಗ್ರಾಪಂ ಕಚೇರಿಯ ಮೊದಲ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.