ಉತ್ತರ ಪ್ರದೇಶ: ಪಲ್ಲವಪುರಂ ಪ್ರದೇಶದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಮಕ್ಕಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಪೋಷಕರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಮೃತರನ್ನು ಸಾರಿಕಾ (೧೦), ನಿಹಾರಿಕಾ (೮), ಸಂಸ್ಕಾರ್ ಅಲಿಯಾಸ್ ಗೋಲು (೬) ಮತ್ತು ಕಲು (೪) ಎಂದು ಗುರುತಿಸಲಾಗಿದೆ. ಮಕ್ಕಳ ಪೋಷಕರಾದ ಜಾನಿ (೪೧) ಮತ್ತು ಬಬಿತಾ (೩೭) ಗಾಯಗೊಂಡಿದ್ದಾರೆ. ಪಲ್ಲವಪುರಂನ ಜನತಾ ಕಾಲೋನಿಯಲ್ಲಿ ಘಟನೆ ನಡೆದಿದೆ. ಮೊಬೈಲ್‌ಅನ್ನು ಚಾರ್ಜ್‌ಗೆ ಹಾಕಿದ್ದ ಸಮಯದಲ್ಲಿ ಉಂಟಾದ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಹೊಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ನಾಲ್ಕು ಮಕ್ಕಳು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಬಬಿತಾ ಅವರ ಸ್ಥಿತಿ ಗಂಭೀರವಾಗಿದೆ. ಜಾನಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.