Friday, April 18, 2025
Google search engine

Homeರಾಜ್ಯಕುಂಭಮೇಳದಲ್ಲಿ ಅಗ್ನಿ ಅವಘಡ: ಸಿಲಿಂಡರ್‌ಗಳು ಸ್ಫೋಟ, ಟೆಂಟ್‌ಗಳು ಬೆಂಕಿಗಾಹುತಿ

ಕುಂಭಮೇಳದಲ್ಲಿ ಅಗ್ನಿ ಅವಘಡ: ಸಿಲಿಂಡರ್‌ಗಳು ಸ್ಫೋಟ, ಟೆಂಟ್‌ಗಳು ಬೆಂಕಿಗಾಹುತಿ

ಉತ್ತರ ಪ್ರದೇಶ: ಪ್ರಯಾಗ್‌ರಾಜ್‌ನ ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ 2 ಸಿಲಿಂಡರ್ ಗಳು ಸ್ಫೋಟಗೊಂಡ ಪರಿಣಾಮ ಟೆಂಟ್ ಗಳು ಸುಟ್ಟು ಭಸ್ಮವಾಗಿದೆ.

ವಿವೇಕಾನಂದ ಸೇವಾ ಸಮಿತಿಗೆ ಸೇರಿದ 25ಕ್ಕೂ ಹೆಚ್ಚು ಟೆಂಟ್‌ಗಳು ಬೆಂಕಿಗಾಹುತಿಯಾಗಿದ್ದು. ಸದ್ಯ ಕುಂಭಮೇಳ ಪ್ರದೇಶದ ಸೆಕ್ಟರ್ 20ಕ್ಕೂ ಬೆಂಕಿ ವ್ಯಾಪಿಸುತ್ತಿದೆ. ಟೆಂಟ್‌ಗಳಲ್ಲಿ ಇಟ್ಟಿದ್ದ ಸಿಲಿಂಡರ್‌ಗಳು ಒಂದೊಂದಾಗಿ ಸ್ಫೋಟಗೊಳ್ಳುತ್ತಿರುವುದರಿಂದ ಬೆಂಕಿ ತೀವ್ರತೆ ಹೆಚ್ಚಾಗುತ್ತಿದೆ. ಬೆಂಕಿ ಅವಘಡದಿಂದಾಗಿ ಮಹಾ ಕುಂಭಮೇಳ ಪ್ರದೇಶದಲ್ಲಿ ಆತಂಕ ಸೃಷ್ಟಿಯಾಗಿದೆ. ಟೆಂಟ್‌ನಲ್ಲಿದ್ದವರನ್ನು ಅಧಿಕಾರಿಗಳು ದೂರ ಕಳಿಸುತ್ತಿದ್ದಾರೆ. ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ. ಸದ್ಯ ಘಟನಾ ಸ್ಥಳಕ್ಕಾಗಮಿಸಿದ 50ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯ ಮಾಡುತ್ತಿವೆ ಎಂದು ತಿಳಿದುಬಂದಿದೆ.

ಮಹಾ ಕುಂಭಮೇಳದ ಸೆಕ್ಟರ್ 19ರಲ್ಲಿ 2-3 ಸಿಲಿಂಡರ್‌ಗಳು ಸ್ಫೋಟಗೊಂಡಿದೆ. ಹಾಗಾಗಿ ಶಿಬಿರಗಳಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸದ್ಯ ಬೆಂಕಿಯನ್ನು ನಿಯಂತ್ರಿಸಲಾಗಿದ್ದು, ಎಲ್ಲರೂ ಸುರಕ್ಷಿತರಾಗಿದ್ದಾರೆ. ಯಾರಿಗೂ ತೊಂದರೆಯಾಗಿಲ್ಲ. ಅಗ್ನಿ ಅವಘಡದ ಕುರಿತು ಸೂಕ್ತ ತನಿಖೆ ನಡೆಸಲಾಗುವುದು ಎಂದು ಪ್ರಯಾಗ್‌ರಾಜ್ ಎಡಿಜಿ ಭಾನು ಭಾಸ್ಕರ್ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular