Wednesday, April 9, 2025
Google search engine

Homeಅಪರಾಧಉಡುಪಿಯ ಮನೆಯೊಂದರಲ್ಲಿ ಅಗ್ನಿ ಅವಘಡ: ಶೆಟ್ಟಿ ಬಾರ್ & ರೆಸ್ಟೋರೆಂಟ್‌ ನ  ಮಾಲೀಕ ಸಾವು

ಉಡುಪಿಯ ಮನೆಯೊಂದರಲ್ಲಿ ಅಗ್ನಿ ಅವಘಡ: ಶೆಟ್ಟಿ ಬಾರ್ & ರೆಸ್ಟೋರೆಂಟ್‌ ನ  ಮಾಲೀಕ ಸಾವು

ಉಡುಪಿ: ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್‌ ಮಾಲೀಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇನ್ನು ಮೃತರ ಪತ್ನಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಅದೃಷ್ಟವಶಾತ್​​ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕರಾಗಿರುವ ರಮಾನಂದ ಶೆಟ್ಟಿ ಅವರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಬೆಂಕಿಯ ಜ್ವಾಲೆಯಿಂದಾಗಿ ಪ್ರಜ್ಞೆ ತಪ್ಪಿದ್ದ ಗಂಡ ಹೆಂಡತಿಯನ್ನು ಅಗ್ನಿಶಾಮಕ ಸಿಬ್ಬಂದಿ ವಿನಾಯಕ್ ರಕ್ಷಿಸಿದ್ದರು. ಘಟನೆಯಲ್ಲಿ ರಮಾನಂದ ಶೆಟ್ಟಿ ಹಾಗೂ ಅವರ ಪತ್ನಿ ಅಶ್ವಿನಿಗೆ ಗಂಭೀರ ಗಾಯಗಳಾಗಿದ್ದವು. ಇಬ್ಬರನ್ನೂ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು.

ಆದರೆ ಶೆಟ್ಟಿ ಬಾರ್ & ರೆಸ್ಟೋರೆಂಟ್‌ ಮಾಲೀಕರಾದ ರಮಾನಂದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನು ಅದೃಷ್ಟವಶಾತ್​​ ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಉಡುಪಿ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಂಕಿಯ ಜ್ವಾಲೆಗೆ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಉಡುಪಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED ARTICLES
- Advertisment -
Google search engine

Most Popular