ಪಿರಿಯಾಪಟ್ಟಣ:ಬರ ಆವರಿಸಿರುವ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆ ಮತ್ತು ಬೀದಿ ದೀಪಗಳ ನಿರ್ವಹಣೆ ಹಾಗೂ ನೈರ್ಮಲ್ಯಕ್ಕೆ ಪ್ರಥಮ ಆಧ್ಯತೆ ನೀಡಲಾಗುವುದು ಎಂದು ಪಿಡಿಒ ಮಲ್ಲೇಶ್ ತಿಳಿಸಿದರು. ತಾಲ್ಲೂಕಿನ ರಾವಂದೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಶನಿವಾರ ನಡೆದ ಗ್ರಾಮ ಸಭೆಯಲ್ಲಿ ಮಾತನಾಡಿದರು.
ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಬರದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿದ್ದು, ಬರದ ನಿರ್ವಹಣೆಯ ಸಲುವಾಗಿ ಪಂಚಾಯಿತಿ ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್ ಸಂಪರ್ಕ, ನೈರ್ಮಲ್ಯ ಹಾಗೂ ಇನ್ನಿತರ ಮೂಲಭೂತ ಸೌಕರ್ಯಗಳಿಗೆ ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಲು ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿಗಳು ಆದಿಯಾಗಿ ಎಲ್ಲರೂ ಸಿದ್ಧರಿದ್ದೇವೆ ಆದ್ದರಿಂದ ಸಾರ್ವಜನಿಕರು ಇದಕ್ಕೆ ಸಹಕಾರ ನೀಡಬೇಕು ಎಂದರು.
ಗ್ರಾಪಂ ಅಧ್ಯಕ್ಷೆ ಸುಜಾತ ಮಾತನಾಡಿ ಸರ್ಕಾರದ ಆದೇಶದಂತೆ ಗ್ರಾಮ ಸಭೆ ಮತ್ತು ವಾರ್ಡ್ ಸಭೆಗಳನ್ನು ಆ ಯೋಜನೆ ಮಾಡಿ ಪಂಚಾಯಿತಿ ವ್ಯಾಪ್ತಿಗೆ ಬರುವ ಎಲ್ಲಾ ಹಳ್ಳಿಗಳ ಮೂಲಭೂತ ಸೌಲಭ್ಯಗಳು ಹಾಗೂ ಸಮಸ್ಯೆಗಳನ್ನು ಸಭೆಯಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಮ್ಮುಖದಲ್ಲಿ ತೀರ್ಮಾನ ಮಾಡಿ ಹಂತ ಹಂತವಾಗಿ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ 2024 25ನೇ ಸಾಲಿನ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಇದನ್ನು ಗ್ರಾಮ ಸಭೆಯಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳ ಕೈಗೊಳ್ಳಬೇಕಾಗುತ್ತದೆ ಎಂದರು.
ಸಭೆಯಲ್ಲಿ ಗ್ರಾಮದ ಮುಖಂಡ ದೊಡ್ಡಣ್ಣ ಮಾತನಾಡಿ ರಾವಂದೂರು ಗ್ರಾಮದಲ್ಲಿ ವಿದ್ಯುತ್ ದೀಪಗಳು ಹಗಲು ರಾತ್ರಿ ನಿನ್ನದೇ ಉರಿತಿದ್ದು ಅದನ್ನು ಸರಿಪಡಿಸಬೇಕು ರಾತ್ರಿ ಸಮಯದಲ್ಲಿ ಮಾತ್ರ ವಿದ್ಯುತ್ ಕಂಬದಲಿ ಇರಬೇಕು ಅದನ್ನು ತರಪಡಿಸುವಂತೆ ಮನವಿ ಮಾಡಲಾಯಿತು ಅದೇ ರೀತಿ ರಾವಂದೂರು ಗ್ರಾಮದ ಮಧ್ಯ ಭಾಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಅವರ ಖಾಲಿ ನಿವೇಶನ ಇದ್ದು ಅಲ್ಲಿ ಕಸದ ರಾಶಿ ಇದೆ ಅದನ್ನು ತೆರವು ಮಾಡಿ ಅದರ ಸುತ್ತ ಕಾಂಪೌಂಡ್ ನಿರ್ಮಾಣ ಮಾಡಬೇಕು ಹಾಗೂ ಸರ್ಕಾರಿ ಖಾಲಿ ನಿವೇಶನಗಳು ಇದ್ದಲ್ಲಿ ಬಡವರಿಗೆ ಅದನ್ನು ನೀಡಬೇಕು ಎಂದರು.
ಈ ಸಂದರ್ಭ ತಾಲೂಕು ಸಾಮಾಜಿಕ ಅರಣ್ಯ ಅಧಿಕಾರಿ ಸಂದೀಪ್ ಮಾತನಾಡಿ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ರೈತರಿಗೆ ಗಿಡಗಳನ್ನು ವಿತರಿಸಲಾಗುತ್ತಿದ್ದು ರೈತರು ತಮ್ಮ ಜಮೀನುಗಳ ಎರಡು ಬದಿಗಳಲ್ಲಿ ತೇಗ, ಹೆಬ್ಬೇವು, ಮಹಾಗನಿ, ಸಿಲ್ವರ್ ಗಿಡಗಳನ್ನು ನಾಟಿ ಮಾಡುವ ಮೂಲಕ ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ಈ ಸಂದರ್ಭ ರಾವಂದೂರು ಗ್ರಾಮ ಪಂಚಾಯತಿ ಕಾರ್ಯದರ್ಶಿ ಬಸವರಾಜ್, ಗ್ರಾಪಂ ಸಹಾಯಕ ದಿನೇಶ್ ಕುಮಾರ್, ಸಿಬ್ಬಂದಿಗಳಾದ ರಾಜು, ಜಯಶಂಕರ್, ಮಹದೇವಯ್ಯ, ಗ್ರಂಥಪಾಲಕ ರಂಗಸ್ವಾಮಿ, ಮಹದೇವ್ ಸೇರಿದಂತೆ ಮತ್ತಿತರರು ಹಾಜರಿದ್ದರು