ಬಳ್ಳಾರಿ: ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (೨೦ ಅಂಶ ಸೇರಿದಂತೆ) ಮೊದಲನೇ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯನ್ನು ಆ.೧೭ ರಂದು ಮಧ್ಯಾಹ್ನ ೦೨.೩೦ ಗಂಟೆಗೆ ಜಿಲ್ಲಾ ಪಂಚಾಯತ್‌ನ ನಜೀರ್‌ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ವಸತಿ, ವಕ್ಫ್ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರು ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ವಹಿಸುವರು ಎಂದು ಕರ್ನಾಟಕ (೨೦ ಅಂಶ) ಅನುಷ್ಠಾನ ಸಮಿತಿಯ ಸದಸ್ಯ ಕಾರ್ಯದರ್ಶಿಯೂ ಆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.