Friday, April 11, 2025
Google search engine

Homeಅಪರಾಧಝೀಕಾ ವೈರಸ್‌ಗೆ ಮೊದಲ ಬಲಿ: ಶಿವಮೊಗ್ಗದಲ್ಲಿ 73 ವರ್ಷದ ವೃದ್ಧ ಸಾವು

ಝೀಕಾ ವೈರಸ್‌ಗೆ ಮೊದಲ ಬಲಿ: ಶಿವಮೊಗ್ಗದಲ್ಲಿ 73 ವರ್ಷದ ವೃದ್ಧ ಸಾವು

ಬೆಂಗಳೂರು: ಶಿವಮೊಗ್ಗ ನಗರದ ಗಾಂಧಿನಗರ ನಿವಾಸಿ 73 ವರ್ಷದ ವೃದ್ಧರೊಬ್ಬರು ಝೀಕಾ ವೈರಾಣು ಸೋಂಕಿನಿಂದ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತೀವ್ರ ಜ್ವರದಿಂದ ಬಳಲುತ್ತಿದ್ದ ಅವರು ಜೂನ್ ತಿಂಗಳಲ್ಲಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಮನೆಗೆ ಮರಳಿದ್ದರು. ಕೆಲ ದಿನಗಳ ಬಳಿಕ ಅವರಿಗೆ ಝೀಕಾ ವೈರಾಣು ಬಾಧಿಸಿರುವುದು ದೃಢಪಟ್ಟಿತ್ತು. ಜುಲೈ ತಿಂಗಳಲ್ಲಿ ಮೃತಪಟ್ಟಿದ್ದರು. ಗಂಭೀರ ಸ್ವರೂಪದ ಕಾಯಿಲೆಯಿಂದ ಬಳಲುತ್ತಿದ್ದ ಮೃತರಿಗೆ ಝೀಕಾ ವೈರಾಣು ಸೋಂಕು ಸಹ ತಗುಲಿತ್ತು ಎಂಬುದು ಮರಣದ ಆಡಿಟ್ ವರದಿಯಲ್ಲಿ ಖಚಿತವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular