Friday, April 11, 2025
Google search engine

Homeರಾಜ್ಯಸುದ್ದಿಜಾಲಅಭಿವೃದ್ಧಿ ಕೆಲಸಗಳಿಗೆ ಪಂಚ ಗ್ಯಾರಂಟಿಗಳು ಅಡ್ಡಿಯಾಗಿವೆ : ಶಾಸಕ ದರ್ಶನ್ ಪುಟ್ಟಣ್ಣಯ್ಯ

ಅಭಿವೃದ್ಧಿ ಕೆಲಸಗಳಿಗೆ ಪಂಚ ಗ್ಯಾರಂಟಿಗಳು ಅಡ್ಡಿಯಾಗಿವೆ : ಶಾಸಕ ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ: ಅಭಿವೃದ್ಧಿ ಕೆಲಸ ನಡೆಯುತ್ತಿಲ್ಲ, ಗ್ಯಾರಂಟಿ ಯೋಜನೆಗಳೂ ಸಿಗುತ್ತಿಲ್ಲವೆಂದು ಜನರು ದೂರುತ್ತಿದ್ದಾರೆ ಎಂದು ಮೇಲುಕೋಟೆ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯಹೇಳಿದ್ದಾರೆ. ಯಾವ ಊರಿಗೆ ಹೋದರೂ ಇದೇ ಮಾತುಗಳು ಕೇಳಿಬರುತ್ತಿವೆ. ರಸ್ತೆ ದುರಸ್ತಿ, ಅಭಿವೃದ್ಧಿ ಕೆಲಸಗಳನ್ನು ಏಕೆ ಮಾಡುತ್ತಿಲ್ಲ ಎಂದು ಜನರು ಪ್ರಶ್ನಿಸುತ್ತಿದ್ದಾರೆ.

ರಾಜ್ಯ ಸರ್ಕಾರ ನೀಡುತ್ತಿರುವ ಗ್ಯಾರಂಟಿ ಯೋಜನೆ ಗಳಿಂದ ಇತರೆ ಅಭಿವೃದ್ಧಿ ಕೆಲಸಗಳಿಗೆ ಅನುದಾನಗಳು ಬರುತ್ತಿಲ್ಲ. ಹೀಗಾಗಿ ಸರ್ಕಾರ ಗ್ಯಾರಂಟಿ ಬಗ್ಗೆ ಪರಾಮರ್ಶೆ ಮಾಡಿ ಅಭಿವೃದ್ಧಿ ಯೋಜನೆಗಳಿಗೆ ಹಣ ನೀಡಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ಶಾಸಕ ದರ್ಶನ್ ಪುಟ್ಟಣ್ಣಯ್ಯ ಒತ್ತಾಯಿಸಿದ್ದಾರೆ.

ನೀವು ಗೆದ್ದು ಒಂದೂವರೆ ವರ್ಷವಾಗಿದೆ, ಏನು ಕೆಲಸ ಮಾಡಿದ್ದೀರಾ ಎಂದು ಜನರು ಕೇಳುತ್ತಿದ್ದಾರೆ. ಜನರ ಅಭಿವೃದ್ಧಿಗೆ ಹಲವು ಇಲಾಖೆಗಳಿಂದ ಅನುದಾನವೇ ಸಿಗುತ್ತಿಲ್ಲ. ಹೀಗಾಗಿ ಅಭಿವೃದ್ಧಿಗೆ ಹಣದ ಅವಶ್ಯಕತೆ ಇದೆ.

ಸದ್ಯ ರಾಜ್ಯದ ಎಲ್ಲಾ ಆದಾಯದ ಮೂಲ ಗ್ಯಾರಂಟಿ ಯೋಜನೆಗಳಿಗೇ ಹೋಗುತ್ತಿದೆ. ಹೀಗಾಗಿ ಸಮತೋಲನವಾಗಿ ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕೆಲಸಕ್ಕೆ ಅನುದಾನ ನೀಡಬೇಕೆಂದು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular