ವಿಜಯನಗರ : ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಿಂದ ಬಳಲಿ ನವಜಾತ ಶಿಶು ಸೇರಿದಂತೆ ಐವರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಗ್ರಾಮದ ಸುಮಾರು ೫೦ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಟಿ. ತುಂಬಿಗೇರೆ ಗ್ರಾಮದಲ್ಲಿ ಘಟನೆ ನಡೆದಿದೆ.
ಮೃತಪಟ್ಟವರನ್ನು ಸುರೇಶ್ (೩೦), ಮಹಾಂತೇಶ್ (೪೫), ಗೌರಮ್ಮ (೬೦), ಹನುಮಂತಪ್ಪ (೩೮) ಮತ್ತು ಎಂಟು ತಿಂಗಳ ಗಂಡು ಮಗು ಎಂದು ಹೇಳಲಾಗುತ್ತಿದೆ. ಇವರ ಸಾವಿಗೆ ಕಲುಷಿತ ನೀರು ಸೇವನೆಯೇ ಕಾರಣ ಎಂಬ ಅನುಮಾನ ವ್ಯಕ್ತವಾಗಿದೆ.