Wednesday, April 9, 2025
Google search engine

Homeಅಪರಾಧರೈಲ್ವೇ ಒಹೆಚ್‌ಇ ತಾಮ್ರದ ತಂತಿ ಕಳ್ಳತನ ಮಾಡುತ್ತಿದ್ದ ಐವರು ಆರೋಪಿಗಳ ಬಂಧನ

ರೈಲ್ವೇ ಒಹೆಚ್‌ಇ ತಾಮ್ರದ ತಂತಿ ಕಳ್ಳತನ ಮಾಡುತ್ತಿದ್ದ ಐವರು ಆರೋಪಿಗಳ ಬಂಧನ

ಶಿವಮೊಗ್ಗ: ಸಾಗರದ ಆನಂದಪುರ ಬಳಿ ಸುಮಾರು ರೂ.೨ ಲಕ್ಷ ಮೌಲ್ಯದ ರೈಲ್ವೇ ಒಹೆಚ್‌ಇ ತಾಮ್ರದ ತಂತಿಯನ್ನು ಕಳವು ಮಾಡಿ ಮಾರಾಟ ಮಾಡಿದ್ದ ೩ ಮಂದಿ ಆರೋಪಿಗಳು ಮತ್ತು ತಂತಿ ಖರೀದಿಸಿದ್ದ ಇಬ್ಬರು ಅಂಗಡಿ ಮಾಲೀಕರನ್ನು ಮೈಸೂರು ರೈಲ್ವೇ ರಕ್ಷಣಾ ವಿಶೇಷ ತಂಡ ಬಂಧಿಸಿದೆ.

ರಕ್ಷಣಾ ಪಡೆಯ ವಿಶೇಷ ತಂಡ, ಮೈಸೂರು ಅಪರಾಧ ವಿಭಾಗದ ನಿರೀಕ್ಷಕ ಎಂ ನಿಶಾದ್ ನೇತೃತ್ವದಲ್ಲಿ ತಪ್ಪಿತಸ್ಥರನ್ನು ಬಂಧಿಸಲಾಗಿದೆ. ಕಳ್ಳತನ ಮಾಡಲು ಬಳಸುತ್ತಿದ್ದ ಒಂದು ನಾಲ್ಕು ಚಕ್ರದ ವಾಹನ (ಟಾಟಾ ಏಸ್) ಮತ್ತು ೧ ದ್ವಿಚಕ್ರ ವಾಹನ, ಕಟ್ಟರ್ ಮತ್ತು ಲ್ಯಾಡರ್ ಟ್ರಾಲಿ ಅಥವಾ ರೈಲ್ವೆ ವಿದ್ಯುದ್ದೀಕರಣ ಉಪಕರಣವನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಸೆ.೦೬ ಮತ್ತು ೦೭ ರಂದು ರಾತ್ರಿ ರೂ. ೨ ಲಕ್ಷ ಮೌಲ್ಯದ ಸುಮಾರು ೨೬೦ ಮೀಟರ್ ರೈಲ್ವೆ ಒಹೆಚ್‌ಇ ತಾಮ್ರದ ತಂತಿಯನ್ನು ಶಿವಮೊಗ್ಗದ ಸಾಗರ ಮತ್ತು ಆನಂದಪುರ ಮಧ್ಯದ ರೈಲು ನಿಲ್ದಾಣ ಕಿ. ಮೀ.ಸಂಖ್ಯೆ ೧೨೦/೮೦೦ ರ ಬಳಿ ಕಳ್ಳತನ ಮಾಡಲಾಗಿತ್ತು.

ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶಿಲ್ಪಿ ಅಗರ್ವಾಲ್ ರವರ ಸೂಚನೆಯಂತೆ ಹುಬ್ಬಳ್ಳಿ ಮತ್ತು ಮೈಸೂರು ವಿಭಾಗೀಯ ರೈಲ್ವೆ ರಕ್ಷಣಾ ಆಯುಕ್ತರಾದ ಜೆ.ಕೆ ಶರ್ಮಾ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸ್ಥಳದಲ್ಲಿ ಲಭ್ಯವಿರುವ ಸಾಕ್ಷ್ಯಗಳನ್ನು ಪರಿಶೀಲನೆ ನಡೆಸಿದರು. ಸ್ಥಳೀಯ ಪೊಲೀಸ್ ಮತ್ತು ಆರ್‍ಪಿಎಫ್‌ನ ಶ್ವಾನ ದಳವನ್ನು ಸೇವೆಗೆ ಕರೆ ತರತಂದು ಪ್ರಕರಣದ ಪತ್ತೆಗೆ ಮೈಸೂರು, ಬೆಂಗಳೂರು ಮತ್ತು ಹುಬ್ಬಳ್ಳಿಯ ಅಪರಾಧ ವಿಭಾಗದ ಸಿಬ್ಬಂದಿಗಳಾದ ಎಂ ನಿಶಾದ್, ಕ್ರೈಂ ಇನ್ಸ್‌ಪೆಕ್ಟರ್ ಮೈಸೂರು ಮತ್ತು ಶಿವಮೊಗ್ಗ ಇನ್ಸ್‌ಪೆಕ್ಟರ್ ಬಿ ಎನ್ ಕುಬೇರಪ್ಪ ಅವರ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಯಿತು.

ಮೂಲ ಮಾಹಿತಿಯ ಆಧಾರದ ಮೇಲೆ ಮತ್ತು ಶಂಕಿತರ ಟವರ್ ಡಂಪ್ ಮತ್ತು ಕರೆ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಿ, ಟವರ್ ಡಂಪ್ ಮತ್ತು ಕರೆ ದಾಖಲೆಗಳನ್ನು ಸ್ವೀಕರಿಸಿ ಶಂಕಿತರ ಗುರುತು, ಪತ್ತೆ ಹಚ್ಚಿತು. ಮತ್ತು ಅವರ ಚಲನ ವಲನಗಳ ಮೇಲೆ ನಿಗಾ ಇಡಲಾಯಿತು. ವಿಶೇಷ ತಂಡವು ಆರೋಪಿಗಳ ವಿಳಾಸ, ಚಲನಗಳನ್ನು ಪತ್ತೆ ಮಾಡಿ, ಅವರನ್ನು ವಶಕ್ಕೆ ಪಡೆದು ಬಂಧಿಸಿತು.

ಈ ಎಲ್ಲಾ ೫ ಬಂಧಿತ ಆರೋಪಿಗಳನ್ನು ಸಾಗರದ ಘನ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಗಿದೆ. ಮೈಸೂರು ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ರೈಲ್ವೆ ಒಹೆಚ್‌ಇ ಕಳ್ಳರ ಗುಂಪನ್ನು ಸೆರೆ ಹಿಡಿದ ಆರ್. ಪಿ. ಎಫ್ ನ ವಿಶೇಷ ತಂಡದ ಕಾರ್ಯವನ್ನು ಶ್ಲಾಘಿಸಿದ್ದಾರೆ.

RELATED ARTICLES
- Advertisment -
Google search engine

Most Popular