ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಮಹನೀಯರ ಜಯಂತಿಗಳನ್ನು ಆಚರಿಸುವ ಮೂಲಕ ಅವರ ತತ್ವ ಮತ್ತು ಆರ್ದಶಗಳನ್ನು ಪಾಲಿಸಿ ಸಮಾನತೆಯ ಸಮಾಜ ನಿರ್ಮಾಣ ಮಾಡಲು ಎಲ್ಲರೂ ಶ್ರಮಿಸಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.
ಪಟ್ಟಣದ ತಾಲೂಕು ಕಚೇರಿಯ ಕೃಷ್ಣರಾಜೇಂದ್ರ ಸಭಾಂಗಣದಲ್ಲಿ ನಡೆದ ಮಡಿವಾಳ ಮಾಚೀದೇವ, ಶಿವಯೋಗಿ ಸಿದ್ದರಾಮೇಶ್ವರ, ಶ್ರೀ ಮಹಾ ಯೋಗಿ ವೇಮನ ಮತ್ತು ಅಂಬಿಕರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಹನೀಯರ ಸಂದೇಶ ಆದರ್ಶ ಮತ್ತು ತತ್ವಗಳ ಸಾರವನ್ನು ಅರಿತು ಜೀವನದಲ್ಲಿ ಪರಿವರ್ತನೆ ಮಾಡಿಕೊಂಡು ಇತರರಿಗೂ ಅವುಗಳ ಮೌಲ್ಯದ ಬಗ್ಗೆ ತಿಳಿಸಬೇಕೆಂದು ಸಲಹೆ ನೀಡಿದರು.
ಸರ್ವ ಜನಾಂಗದ ಮಹಾನ್ ಪುರುಷರ ಜಯಂತಿಗಳನ್ನು ಆಚರಣೆ ಮಾಡುವ ಮೂಲಕ ಅವರ ಸದುದ್ದೇಶವನ್ನು ಸಮಾಜಕ್ಕೆ ಸಾರಿ ಜನರನ್ನು ಮುಖ್ಯ ವಾಹಿನಿಗೆ ತರಲು ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಮಹನೀಯರ ಜಯಂತಿಗಳನ್ನು ಆಚರಣೆ ಮಾಡಲು ಅಧಿಕೃತ ಆದೇಶ ಹೊರಡಿಸಿ ಇತರರಿಗೆ ಮಾದರಿಯಾಗಿದ್ದು ಇದಕ್ಕಾಗಿ ಅವರನ್ನು ಕ್ಷೇತ್ರದ ಜನತೆಯ ಪರವಾಗಿ ಅಭಿನಂದಿಸುತ್ತೇನೆ ಎಂದರು.
ಪುರಸಭೆ ಅಧ್ಯಕ್ಷ ಶಿವುನಾಯಕ್, ಮಡಿವಾಳ ಸಮಾಜದ ಬೋರಶೆಟ್ಟಿ, ಸಿದ್ದನಕೊಪ್ಪಲು ಕುಮಾರ್, ಬೆಸ್ತ ಸಮಾಜದ ಮುಖಂಡ ಆರ್ಮುಗಂ, ತಹಶೀಲ್ದಾರ್ ಜಿ.ಸುರೇಂದ್ರಮೂರ್ತಿ ಮಾತನಾಡಿದರು.
ಮುಖಂಡರಾದ ಎಸ್.ಮಹದೇವ್, ರಾಮಯ್ಯ, ಕೃಷ್ಣಯ್ಯ, ಆರೋಗ್ಯಾಧಿಕಾರಿ ಡಾ.ಡಿ.ನಟರಾಜು, ಪುರಸಭೆ ಮುಖ್ಯಾಧಿಕಾರಿ ಬಿ.ವಿ.ವೆಂಕಟೇಶ್, ಸಿಡಿಪಿಒ ಸಿ.ಎಂ.ಅಣ್ಣಯ್ಯ, ತಾಲೂಕು ಕುರುಬರ ಸಂಘದ ನಿರ್ದೇಶಕತಾದ ರಾಮಕೃಷ್ಣೇಗೌಡ, ಕೆ.ಹೆಚ್.ಬುಡೀಗೌಡ ಮತ್ತಿತರರು ಹಾಜರಿದ್ದರು.