ಹಾಸನ: ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ಒಳಗಾಗಿದೆ. ಹಿಂಬದಿಯಿಂದ ಬಂದ ಇನೋವಾ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ.
ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶಕ್ಕೆ ಮುನಿಯಪ್ಪ ಪ್ರಯಾಣಿಸುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 75 ಶಾಂತ್ರಿಗ್ರಾಮದ ಟೋಲ್ ಬಳಿ ದುರ್ಘಟನೆ ನಡೆದಿದೆ.
ಅಪಘಾತದ ಹೊಡೆತಕ್ಕೆ ಸಚಿವರ ಕಾರು ಜಖಂಗೊಂಡಿದೆ. ಈ ಹಿನ್ನೆಲೆಯಲ್ಲಿ ಬದಲಿ ವಾಹನದ ಮೂಲಕ ಸಚಿವರು ಸಮಾವೇಶಕ್ಕೆ ಆಗಮಿಸಿದ್ದಾರೆ. ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಗೆದ್ಮೇಲೆ ಸಿದ್ದರಾಮಯ್ಯ ಬಲ ಹೆಚ್ಚಾಗಿದೆ. ಹೀಗಾಗಿ ಹಾಸನದಲ್ಲಿ ಸಮಾವೇಶ ಆಯೋಜಿಸಲಾಗಿದೆ. ಈ ಮೂಲಕ ಬಲ, ವರ್ಚಸ್ಸನ್ನ ರಾಜ್ಯಕ್ಕೆ ಹಬ್ಬಿಸಲು ತಂತ್ರ ಹೆಣೆಯಲಾಗಿದೆ. ಹಾಸನದ ಅರಸೀಕೆರೆ ರಸ್ತೆಯ ಎಸ್.ಎಂ ಕೃಷ್ಣ ನಗರ ಬಡಾವಣೆಯಲ್ಲಿ ಕಾರ್ಯಕ್ರಮ ನಡೆಯುತ್ತಿದೆ.