Friday, June 27, 2025
Google search engine

Homeಸ್ಥಳೀಯಇತಿಹಾಸದಲ್ಲಿ ಮೊದಲ ಬಾರಿಗೆ ಜೂನ್‌ ತಿಂಗಳಲ್ಲೇ ಕೆಆರ್‌ಎಸ್ ಡ್ಯಾಂ ಭರ್ತಿ.!

ಇತಿಹಾಸದಲ್ಲಿ ಮೊದಲ ಬಾರಿಗೆ ಜೂನ್‌ ತಿಂಗಳಲ್ಲೇ ಕೆಆರ್‌ಎಸ್ ಡ್ಯಾಂ ಭರ್ತಿ.!

ಮಂಡ್ಯ: ಹಳೆ ಮೈಸೂರು ಭಾಗದ ಕೃಷಿಯ ಜೀವನಾಡಿಯಾಗಿ ಗುರುತಿಸಲ್ಪಡುವ ಕಾವೇರಿ ನದಿಯ ಮೇಲೆ ನಿರ್ಮಿತವಾಗಿರುವ ಪ್ರಸಿದ್ಧ ಕೆಆರ್‌ಎಸ್ ಡ್ಯಾಂ ಇದೇ ಮೊದಲ ಬಾರಿಗೆ ಜೂನ್‌ ತಿಂಗಳಲ್ಲೇ ಸಂಪೂರ್ಣ ಭರ್ತಿಯಾಗಿದೆ. ಈ ಮೂಲಕ ಡ್ಯಾಂ ಇತಿಹಾಸದಲ್ಲಿ ಹೊಸ ದಾಖಲೆಯೊಂದನ್ನು ನಿರ್ಮಿಸಿದೆ.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಈ ಡ್ಯಾಂ ಸಾಮಾನ್ಯವಾಗಿ ಜುಲೈ ಅಥವಾ ಆಗಸ್ಟ್‌ ತಿಂಗಳಲ್ಲಿ ಭರ್ತಿಯಾಗುವುದು ಸಾಮಾನ್ಯ. ಆದರೆ ಈ ವರ್ಷ ಮಳೆಗಾಲದ ಆರಂಭದಲ್ಲೇ ಜೂನ್ ತಿಂಗಳಲ್ಲಿ ಭರ್ತಿ ಆಗಿರುವುದು ಅಪರೂಪದ ಸಂಗತಿ. ಈ ಸಾಂದರ್ಭಿಕ ಕ್ಷಣವು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಐತಿಹಾಸಿಕ ಹೆಗ್ಗಳಿಕೆಯನ್ನು ತರಲಿದೆ. ಜೂನ್​ನಲ್ಲೇ ಬಾಗಿನ ಅರ್ಪಿಸುವ ಅವಕಾಶ ಈವರೆಗೆ ಯಾವ ಮುಖ್ಯಮಂತ್ರಿಗೂ ದೊರೆತಿಲ್ಲ.

1979 ರಿಂದ ಕಾವೇರಿಗೆ ಬಾಗಿನ ಅರ್ಪಿಸುವ ಪದ್ದತಿ ಆರಂಭವಾಗಿದೆ. ಮೊದಲ ಬಾರಿಗೆ ಡಿ. ದೇವರಾಜ ಅರಸ್ ಬಾಗಿನ ಅರ್ಪಿಸುವ ಮೂಲಕ ಆ ಪದ್ದಗೆ ನಾಂದಿ ಹಾಡಿದ್ದರು. ಅಲ್ಲಿಂದ ಇಲ್ಲಿಯವರೆಗೂ ಯಾವೊಬ್ಬ ಮುಖ್ಯಮಂತ್ರಿಗೂ ಜೂನ್​ನಲ್ಲಿ ಬಾಗಿನ ಅರ್ಪಿಸುವ ಅವಕಾಶ ಸಿಕ್ಕಿಲ್ಲ.

ಈ ವರ್ಷ ಅವಧಿಪೂರ್ವ ಮುಂಗಾರು ಮಳೆಯ ಕಾರಣ, ಜೂನ್ ಆರಂಭದಲ್ಲೇ ಡ್ಯಾಂ ನೀರಿನ ಮಟ್ಟ 100 ಅಡಿ ದಾಟುವ ಮೂಲಕ ದಾಖಲೆ ಬರೆದಿತ್ತು. 124.80 ಅಡಿ ಗರಿಷ್ಠ ಸಾಮರ್ಥ್ಯವಿರುವ ಈ ಜಲಾಶಯದ ನೀರಿನ ಮಟ್ಟ ಮೇ ಕೊನೆಯ ವಾರದಲ್ಲೇ 98 ಅಡಿ ತಲುಪಿತ್ತು. ಆ ಸಂದರ್ಭದಲ್ಲೇ ಕೆಆರ್​ಎಸ್​ ಜಲಾಶಯಕ್ಕೆ 22 ಸಾವಿರ ಕ್ಯೂಸೆಕ್ ನೀರು ಒಳಹರಿವು ಇತ್ತು. ಹಾಗಾಗಿ ಡ್ಯಾಂನಿಂದ 630 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿತ್ತು.

RELATED ARTICLES
- Advertisment -
Google search engine

Most Popular