ಕೆ.ಆರ್.ನಗರ: ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಶೇಕಡ 90ರಷ್ಟು ಮತದಾ ನವನ್ನು ಪಡೆದುಕೊಂಡು ಅಲ್ಪಸಂಖ್ಯಾ ತರ ವಿರುದ್ಧ ದಮನಕಾರಿ ನೀತಿ ಅನುಸರಿಸುತ್ತಿದೆ ಎಂದು ಸೋಶಿಯಲ್ ಡೆಮಾಕ್ರಟಿ ಪಾರ್ಟಿ ಆಫ್ ಇಂಡಿಯಾದ (ಎಸ್ ಡಿ ಪಿ ಐ) ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ನೂರುದ್ದೀನ್ ಕಿಡಿಕಾರಿದರು.
ಪಟ್ಟಣದ ಮುಸ್ಲಿಂ ಬಡಾವಣೆಯಲ್ಲಿ ಖಾಸಗಿ ಕಟ್ಟಡದಲ್ಲಿ ಆಯೋಜಿಸಿದ ಸೋಶಿಯಲ್ ಡೆಮಾಕ್ರಟಿ ಪಾರ್ಟಿ ಆಫ್ ಇಂಡಿಯಾದ ಪಕ್ಷ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಲ್ಪಸಂಖ್ಯಾತರ ಪರ ನಿಲ್ಲಬೇಕಾದ ಕಾಂಗ್ರೆಸ್ ಸರ್ಕಾರ ದಮನಕಾರಿ ನೀತಿಯನ್ನು ಅನುಸರಿ ಸುತ್ತಿದ್ದನ್ನು ಬಿಟ್ಟು ಅಲ್ಪಸಂಖ್ಯಾತರ ಏಳಿಗೆಗಾಗಿ ಕಾಂತರಾಜ್ ಆಯೋಗದ ವರದಿ ಮತ್ತು ಸದಾಶಿವ ಆಯೋಗದ ವರದಿಯನ್ನು ಈ ಕೂಡಲೇ ಜಾರಿ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು.
ನಂತರ ಮಾತನಾಡಿದ ಎಸ್ ಡಿಪಿಐ ರಾಜ್ಯ ಸಮಿತಿ ಸದಸ್ಯ ಅಮ್ಜದ್ ಮೈಸೂರು ಕೆ.ಆರ್.ನಗರ ತಾಲ್ಲೂಕಿನ ರಾಜಕೀಯ ಚಿತ್ರಣ ಮಾಜಿ ಸಚಿವ ಎಸ್ ನಂಜಪ್ಪ, ಎಚ್.ವಿಶ್ವನಾಥ್, ಸಾ.ರಾ.ಮಹೇಶ್ ಹಾಗೂ ಡಿ.ರವಿಶಂಕರ್ ಇವರುಗಳ ಆಡಳಿತ ಅವಧಿಯಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಜಿಲ್ಲಾ ಪಂಚಾಯತ್ ಅಥವಾ ತಾಲ್ಲೂಕು ಪಂಚಾಯತಿಯಾಗಲಿ ಒಂದು ರಾಜಕೀಯ ಸ್ಥಾನಮಾನ ಕಲ್ಪಿಸಲಾಗಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು.
ಅಲ್ಪಸಂಖ್ಯಾತರ ಆರ್ಥಿಕ ಸ್ಥಿತಿ ಗತಿಗಳ ಬೆಳವಣಿಗೆಯ ರೂಪುರೇಷೆಗಳನ್ನು ತಯಾರಿಸಬೇಕು ಮತ್ತು ಮೀಸಲಾತಿಯನ್ನು ಶೇಕಡ 8ಕ್ಕೆ ಏರಿಸಕೆ ಮಾಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದರು.
ಈ ಸಮಾವೇಷದಲ್ಲಿ ರಾಜ್ಯ ಸಮಿತಿ ಸದಸ್ಯ ಅಮ್ಜದ್ ಮೈಸೂರು,ಮೈಸೂರು ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಅಕ್ಬರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲಿಯಾಖತ್, ತಾಲ್ಲೂಕು ಅಧ್ಯಕ್ಷ ನದೀಂ ಖಾನ್, ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಮುಹೀಬ್ ಖಾನ್, ತಾಲ್ಲೂಕು ಕಾರ್ಯದರ್ಶಿ ಸುಹೇಲ್ ಷರೀಫ್, ಮುಖಂಡರಾದ ಸೈಯಾದ್ ಇರ್ಫಾನ್, ಮಹಮ್ಮದ್ ಇರ್ಫಾನ್, ಮುಜಾಹೀದ್, ಹಿದಯಾತ್, ಪರ್ವಿಝ್ ಸೇರಿದಂತೆ ನೂರಕ್ಕೂ ಹೆಚ್ಚು ಕಾರ್ಯಕರ್ತರು ಮುಖಂಡರು ಹಾಜರಿದ್ದರು.