Saturday, June 14, 2025
Google search engine

Homeಅಪರಾಧ10 ಕೋಟಿ ರೂ. ಮೌಲ್ಯದ ಎಂಡಿಎಂಎ ಮಾದಕವಸ್ತು ಸಹಿತ ವಿದೇಶಿ ಮಹಿಳೆ ಬಂಧನ

10 ಕೋಟಿ ರೂ. ಮೌಲ್ಯದ ಎಂಡಿಎಂಎ ಮಾದಕವಸ್ತು ಸಹಿತ ವಿದೇಶಿ ಮಹಿಳೆ ಬಂಧನ

ಬೆಂಗಳೂರು: 10 ಕೋಟಿ ರೂ. ಮೌಲ್ಯದ ಎಂಡಿಎಂಎ ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನು ಸಿಸಿಬಿ ಹಾಗೂ ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮಹಿಳೆ ಮೂರು ವರ್ಷಗಳ ಹಿಂದೆ ಬಿಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದಿದ್ದಳು. ನಂತರ ಎಜುಕೇಶನ್ ವೀಸಾ ಪಡೆದು ತೆಲಂಗಾಣ ಯೂನಿವರ್ಸಿಟಿಯಲ್ಲಿ ವ್ಯಾಸಂಗ ಮಾಡುವುದಾಗಿ ಹೇಳಿದ್ದರೂ ಕಾಲೇಜಿಗೆ ದಾಖಲಾಗದೆ ಡ್ರಗ್ಸ್ ಪೆಡ್ಲಿಂಗ್‌ಗೆ ಇಳಿದಿದ್ದಳು.

ದೆಹಲಿಯಿಂದ ಬೆಂಗಳೂರಿಗೆ ಬಸ್‌ನಲ್ಲಿ ಎಂಡಿಎಂಎ ತರುತ್ತಿದ್ದಾಗ ಚಿಕ್ಕಜಾಲದ ರಾಜಾನುಕುಂಟೆ ಬಳಿ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಮಹಿಳೆ ಹೊಸ ಚೂಡಿದಾರ್ ಡ್ರೆಸ್ ಪೀಸ್ಗಳ ನಡುವೆ ಮಾದಕವಸ್ತು ಅಡಗಿಸಿಟ್ಟಿದ್ದಳು.

ಬಂಧಿತಳಿಂದ 5.325 ಕೆಜಿ ಎಂಡಿಎಂಎ ಮತ್ತು ಆ್ಯಪಲ್ ಮೊಬೈಲ್ ವಶಕ್ಕೆ ಪಡೆದುಕೊಳ್ಳಲಾಗಿದೆ. ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES
- Advertisment -
Google search engine

Most Popular