Friday, April 4, 2025
Google search engine

Homeಅಪರಾಧಕಾಡಾನೆ ದಾಳಿಗೆ ಅರಣ್ಯ ಇಲಾಖೆ ನೌಕರ ಸಾವು

ಕಾಡಾನೆ ದಾಳಿಗೆ ಅರಣ್ಯ ಇಲಾಖೆ ನೌಕರ ಸಾವು

ಬೆಂಗಳೂರು: ಬನ್ನೇರುಘಟ್ಟ ವನ್ಯಜೀವಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿ ಮಾದಣ್ಣ ಶುಕ್ರವಾರ ಮುಂಜಾವ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಬನ್ನೇರುಘಟ್ಟದ ಕಲ್ಕೆರೆ ಗಸ್ತಿನ ದೊಡ್ಡ ಬಂಡೆ ಅರಣ್ಯ ಪ್ರದೇಶದ ಬಳಿ ಕಾವಲು ಕಾಯುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.

ಆನೆಗಳ ಇರುವಿಕೆಯನ್ನು ಪತ್ತೆ ಮಾಡುವಲ್ಲಿ ನೈಪುಣ್ಯತೆ ಹೊಂದಿದ್ದ ಮಾದಣ್ಣ ನಿಧನಕ್ಕೆ ಅರಣ್ಯ ಇಲಾಖೆ ಸಚಿವ ಈಶ್ವರ ಬಿ. ಖಂಡ್ರೆ ಸಂತಾಪ ಸೂಚಿಸಿದ್ದಾರೆ ಮತ್ತು ಮೃತರ ಕುಟುಂಬಕ್ಕೆ ಒಂದು ವಾರದೊಳಗೆ ೨೫ ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ಮೃತರ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಅರಣ್ಯ ಇಲಾಖೆಯಲ್ಲಿ ಉದ್ಯೋಗ ದೊರಕಿಸುವ ಪ್ರಯತ್ನ ಮಾಡುವ ಭರವಸೆಯನ್ನೂ ಸಚಿವರು ನೀಡಿದರು.

RELATED ARTICLES
- Advertisment -
Google search engine

Most Popular