Sunday, September 14, 2025
Google search engine

Homeರಾಜ್ಯಸುದ್ದಿಜಾಲಅರಣ್ಯ ಹುತಾತ್ಮರ ದಿನಾಚರಣೆ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಅರಣ್ಯ ಹುತಾತ್ಮರ ದಿನಾಚರಣೆ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಬಳ್ಳಾರಿ: ಜಿಲ್ಲಾ ಅರಣ್ಯ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬಳ್ಳಾರಿ ಜಿಲ್ಲಾ ಶಾಖೆ ಮತ್ತು ಬಿಎಂಸಿಆರ್ ಸಿ ಇವರ ಸಂಯುಕ್ತಾಶ್ರಯದಲ್ಲಿ ಅರಣ್ಯ ಹುತಾತ್ಮರ ದಿನಾಚರಣೆ ಅಂಗವಾಗಿ ಗುರುವಾರ ನಗರದ ರೇಡಿಯೋ ಪಾರ್ಕ್ ಹತ್ತಿರದ ಜಿಲ್ಲಾ ಅರಣ್ಯ ಇಲಾಖೆಯ ಕಚೇರಿ ಆವರಣದಲ್ಲಿ ಸ್ವಯಂ ರಕ್ತದಾನ ಶಿಬಿರ ನಡೆಯಿತು.

ಬಳ್ಳಾರಿ ವಲಯ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್ ಬಸವರಾಜ ಅವರು ಶಿಬಿರಕ್ಕೆ ಚಾಲನೆ ನೀಡಿ, ಮಾತನಾಡಿದ ಅವರು ಪರಿಸರ, ವನ್ಯಜೀವಿಗಳು ಮತ್ತು ಅರಣ್ಯ ಸಂರಕ್ಷಣೆಯ ಕಾರ್ಯದಲ್ಲಿ ಅರಣ್ಯ ಇಲಾಖೆಯ ನೌಕರರು ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.

ಅರಣ್ಯ ಅಧಿಕಾರಿಗಳು ಮುಂದಿನ ಪೀಳಿಗೆಗೆ ಅರಣ್ಯವನ್ನು ಉಳಿಸುವ ಕಾರ್ಯವನ್ನು ಮಾಡುತ್ತಿದ್ದಾರೆ. ಅರಣ್ಯ ಮತ್ತು ಪರಿಸರ ಸಂರಕ್ಷಣೆ ಅರಣ್ಯ ಇಲಾಖೆಯ ಜವಾಬ್ದಾರಿ ಮಾತ್ರವಲ್ಲ. ಸಾರ್ವಜನಿಕರೂ ಕೈ ಜೋಡಿಸಬೇಕು ಎಂದರು. ಇದೇ ವೇಳೆ ಅರಣ್ಯ ಸಿಬ್ಬಂದಿಗಳು ತಮ್ಮ ವೈಯಕ್ತಿಕ ಆರೋಗ್ಯದ ಬಗ್ಗೆ ಗಮನ ನೀಡಬೇಕು ಎಂದು ಕಿವಿಮಾತು ಹೇಳಿದರು.

ಶಿಬಿರದಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು. ಪ್ರಮಾಣ ಪತ್ರ, ಫ್ರೂಟ್ ಜ್ಯೂಸ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬಳ್ಳಾರಿ ಜಿಲ್ಲಾ ಶಾಖೆಯ ಕಾರ್ಯದರ್ಶಿ ಎಂ.ಎ.ಷಕೀಬ್, ಈಸಿ ಸದಸ್ಯರಾದ ಪ್ರೊ.ಕೊಪ್ಪಗಲ್ಲು ವೀರೇಶ್, ಬಿ.ದೇವಣ್ಣ, ರೆಡ್ ಕ್ರಾಸ್ ಸದಸ್ಯರಾದ ಈಜಾಜ್ ಅಹಮದ್, ಶಮೀಮ್ ಜಕಾಲಿ, ಶಿವಸಾಗರ್, ಮೆಹಬೂಬ್ ಭಾಷಾ, ಸಮೀರ್ ಸೇಟ್, ತಾಹೆರ್ ಸೇಟ್, ಎಂ.ವಲಿ ಭಾಷಾ ಸೇರಿದಂತೆ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular