ಮಂಗಳೂರು (ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಈ ನಡುವೆ ದೇವಾಲಯದ ಸಮೀಪ ಕಾಡಾನೆಯೊಂದು ಕಾಣಿಸಿಕೊಂಡಿದೆ.
ಕಾಡಾನೆಯನ್ನು ಕಾಡಿನ ಗಡಿ ಹತ್ತಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಯಶಸ್ವಿಯಾಗಿದ್ದಾರೆ. ದೇವಾಲಯದ ಮಠದ ಬಳಿ ಕಾಡಾನೆ ಕಂಡುಬಂದಿದ್ದು, ಜನರು ಓಡಿಸಲು ಹರಸಾಹಸಪಟ್ಟರು.
ಜಾತ್ರೆಯ ಬೆಳಕು, ಬ್ಯಾಂಡ್ ಸದ್ದಿಗೆ ಬೆದರಿದ ಆನೆ ಓಡಿದೆ. ಮತ್ತೆ ಕಂಡುಬಂದರೆ ದೇಗುಲದ ಆನೆ ಎಂದು ತಿಳಿದು ಅದಕ್ಕೆ ನಮಸ್ಕರಿಸಲು ಭಕ್ತರು ಮುಂದಾಗಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಪುತ್ತೂರು ಉಪ ಆಯುಕ್ತರು ಮತ್ತು ದೇಗುಲದ ಆಡಳಿತಾಧಿಕಾರಿಯವ್ರು ಭಕ್ತರು ಎಚ್ಚರಿಕೆ ವಹಿಸುವಂತೆ ತಿಳಿಸಿದ್ದಾರೆ. ಆನೆ ಓಡಾಡಿರುವ ದೃಶ್ಯಗಳನ್ನು ಕೆಲವರು ಮೊಬೈಲ್ಗಳಲ್ಲಿ ಸೆರೆಹಿಡಿದಿದ್ದು, ಸಿಸಿಟಿವಿಯಲ್ಲೂ ಚಲನವಲನ ದಾಖಲಾಗಿದೆ.